Monday, August 10, 2026
Homeಮುದ್ರಾಡಿ ಗ್ರಾಮ ಪಂಚಾಯತ್‌ಮುದ್ರಾಡಿ ತುಂಡುಗುಡ್ಡೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ನೋಟ್ ಪುಸ್ತಕ ಹಾಗೂ ಕೊಡೆ ವಿತರಣೆ.

ಮುದ್ರಾಡಿ ತುಂಡುಗುಡ್ಡೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ನೋಟ್ ಪುಸ್ತಕ ಹಾಗೂ ಕೊಡೆ ವಿತರಣೆ.

ಮುದ್ರಾಡಿ :  ಮುದ್ರಾಡಿ ತುಂಡುಗುಡ್ಡೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಾನಿಗಳಾದ ಶ್ರೀಧರ ಶೆಟ್ಟಿ ಹಾಗೂ ಪ್ರಮೀಳಾ ಶ್ರೀಧರ ಶೆಟ್ಟಿ ಹಾಗೂ ಹಳೆ ವಿದ್ಯಾರ್ಥಿ ದೀಪಕ್ ಕುಮಾರ್ ಪೋಷಕರಾದ ಮಂದಾರ ಪೂಜಾರಿ,  ಜ್ಯೋತಿ ಕೆ.ಎಂ.ಕೊಡಮಾಡಿದ ಉಚಿತ ನೋಟ್ ಪುಸ್ತಕ ಹಾಗೂ ಕೊಡೆ ವಿತರಣಾ ಸಮಾರಂಭ ಇತ್ತೀಚೆಗೆ ನೆರವೇರಿತು.

ಯಕ್ಷಗಾನ ತರಬೇತಿ ಹಾಗೂ ಸ್ಪೋಕನ್ ಇಂಗ್ಲಿಷ್ ತರಗತಿಗಳ ಉದ್ಘಾಟನೆ ನೆರವೇರಿತು. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳು ಮಕ್ಕಳಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ ಎಂದು ಕಾರ್ಯಕ್ರಮವನ್ನು ಉದ್ಘಾಟಿಸಿದ ಯಕ್ಷಗಾನ ಗುರು ಸುಬ್ರಹ್ಮಣ್ಯ ಪ್ರಸಾದ್ ಹೇಳಿದರು. ಮುದ್ರಾಡಿ ಗ್ರಾಮ ಪಂಚಾಯತಿ ಮಾಜಿ ಸದಸ್ಯ ಗಣಪತಿ ಎಂ, ವಕೀಲ ಸುರೇಶ ಪೂಜಾರಿ, ಸ್ಪೋಕನ್ ಇಂಗ್ಲೀಷ್ ಶಿಕ್ಷಕಿ ಚಿತ್ರಕುಮಾರಿ, ಎಸ್ ಡಿ ಎಂ ಸಿ ಗೌರವಾಧ್ಯಕ್ಷ ಮಧುಸೂದನ್ ಭಟ್, ಅಧ್ಯಕ್ಷ ಶಂಕರ್ ಕುಲಾಲ್ ಉಪಾಧ್ಯಕ್ಷ ಅಖಿಲಾ ಶೆಟ್ಟಿ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಚಿತ್ರ ಸ್ವಾಗತಿಸಿದರು. ಸಹ ಶಿಕ್ಷಕಿ ಪ್ರಮಿತ ನಿರೂಪಿಸಿದರು. ಶಿಕ್ಷಕಿ ಬಾಬಿ ವಂದಿಸಿದರು.

 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments