Thursday, September 24, 2026
Homeಮುದ್ರಾಡಿ ಗ್ರಾಮ ಪಂಚಾಯತ್‌ಮುದ್ರಾಡಿ ಪ್ರೌಢಶಾಲೆಯಲ್ಲಿ "ಪ್ರಯಾಸ ಡೇ "ಕಾರ್ಯಕ್ರಮ.

ಮುದ್ರಾಡಿ ಪ್ರೌಢಶಾಲೆಯಲ್ಲಿ “ಪ್ರಯಾಸ ಡೇ “ಕಾರ್ಯಕ್ರಮ.

ಮುದ್ರಾಡಿ  : ಹದಿಹರೆಯದ ಹುಡುಗಿಯರು ದೈಹಿಕ ಬದಲಾವಣೆಗೆ ಒಗ್ಗಿಕೊಂಡು ಜೀವನ ಕ್ರಮವನ್ನು ಅಳವಡಿಸಿಕೊಳ್ಳಬೇಕು. ಬದಲಾವಣೆ ಸಹಜ ಪ್ರಕ್ರಿಯೆ. ಯಾವುದೇ ಸವಾಲುಗಳನ್ನು ಧೈರ್ಯವಾಗಿ ಎದುರಿಸುವ ಮನಸ್ಥಿತಿಯನ್ನು ಬೆಳೆಸಿಕೊಳ್ಳಿ. ತಾಯಂದಿರಲ್ಲಿ, ವೈದ್ಯರಲ್ಲಿ, ಮಹಿಳಾ ಶಿಕ್ಷಕಿಯರಲ್ಲಿ ತಮ್ಮ ಸಮಸ್ಯೆಗಳನ್ನು ತಿಳಿಸಿ ಪರಿಹಾರವನ್ನು ಕಂಡುಕೊಳ್ಳಿ. ಉತ್ತಮ ಆರೋಗ್ಯವಂತರಾಗಿ ಶಿಕ್ಷಣವನ್ನು ಪಡೆದು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಿ ಎಂದು ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರದ ವೈಧ್ಯೆ ಡಾ. ಅರ್ಪಿತಾ ಶೆಟ್ಟಿ ಹೇಳಿದರು.

ಅವರು ಹೆಬ್ರಿ ಜೇಸಿರೆಟ್ ವತಿಯಿಂದ  ಮುದ್ರಾಡಿ ಎಂ. ಎನ್. ಡಿ. ಎಸ್. ಎಂ. ಅನುದಾನಿತ ಪ್ರೌಢಶಾಲೆಯಲ್ಲಿ ನಡೆದ “ಪ್ರಯಾಸ ಡೇ “ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ವಿದ್ಯಾರ್ಥಿನಿಯರಿಗೆ ಮಾಹಿತಿ ನೀಡಿದರು. ಶಾಲೆಯ ಮುಖ್ಯ ಶಿಕ್ಷಕರಾದ ಚಂದ್ರಶೇಖರ ಭಟ್, ಹೆಬ್ರಿ ಜೇಸಿಐ ಅಧ್ಯಕ್ಷ ಸತೀಶ್ ಕುಲಾಲ್, ಮಾಜಿ ಅಧ್ಯಕ್ಷರಾದ ಸೋನಿ ಪಿ. ಶೆಟ್ಟಿ, ಪೂರ್ವಾಧ್ಯಕ್ಷರಾದ ಸಂತೋಷ್ ಕುಮಾರ ಶೆಟ್ಟಿ, ಪ್ರದೀಪ ಕುಮಾರ್ ಶೆಟ್ಟಿ, ಜೇಸಿರೆಟ್ ಕೋ ಆರ್ಡಿನೇಟರ್ ಸುಪ್ರೀತಾ ಶೆಟ್ಟಿ, ಆಪ್ತ ಸಮಾಲೋಚಕಿ ಪವಿತ್ರಾ, ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!