Monday, August 10, 2026
Homeಹೆಬ್ರಿಮುದ್ರಾಡಿಯಲ್ಲಿ ಪ್ರೌಢಶಾಲೆಯಲ್ಲಿ ಕೆಂಪೇಗೌಡ ಜಯಂತಿ ಆಚರಣೆ

ಮುದ್ರಾಡಿಯಲ್ಲಿ ಪ್ರೌಢಶಾಲೆಯಲ್ಲಿ ಕೆಂಪೇಗೌಡ ಜಯಂತಿ ಆಚರಣೆ

ಹೆಬ್ರಿ : ಬೆಂಗಳೂರು ನಗರದ ನಿರ್ಮಾತೃ ನಾಡಪ್ರಭು ಕೆಂಪೇಗೌಡರು ದೂರದೃಷ್ಟಿಯ ಆಡಳಿತಗಾರರಾಗಿದ್ದರು. ಕೃಷಿಯ ಅಭಿವೃದ್ಧಿಗೆ ಸದಾ ಪ್ರೋತ್ಸಾಹವನ್ನು ನೀಡುತ್ತಾ ಬಂದಿದ್ದರು. ಸಾಮಾಜಿಕ ಸುಧಾರಕರಾಗಿ, ಸಾಂಸ್ಕೃತಿಕ ರಾಯಭಾರಿಯಾಗಿ ಅವರು ನೀಡಿದ ಸೇವೆ, ತ್ಯಾಗ, ಆದರ್ಶಗಳು ಎಲ್ಲರಿಗೂ ಅನುಕರಣೀಯ ಎಂದು ಮುದ್ರಾಡಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಬಲ್ಲಾಡಿ ಚಂದ್ರಶೇಖರ ಭಟ್ ಹೇಳಿದರು.

ಅವರು ಮುದ್ರಾಡಿ ಎಂ. ಎನ್. ಡಿ. ಎಸ್. ಎಂ. ಅನುದಾನಿತ ಪ್ರೌಢಶಾಲೆಯಲ್ಲಿ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆಯಲ್ಲಿ ಕೆಂಪೇಗೌಡರ ಸಾಧನೆಯ ಬಗ್ಗೆ ಮಾತನಾಡಿದರು. ಶಿಕ್ಷಕರಾದ ಮಹೇಶ್ ನಾಯ್ಕ್, ಶ್ಯಾಮಲಾ, ರಘುಪತಿ ಹೆಬ್ಬಾರ್, ಅನುಷಾ, ಶಾಲಾ ವಿದ್ಯಾರ್ಥಿ ನಾಯಕ ಪ್ರತೀಕ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿ ದಿಶಾಂತ್ ಸ್ವಾಗತಿಸಿ, ಗಗನ್ ವಂದಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments