Sunday, August 9, 2026
Homeಹೆಬ್ರಿಉಡುಪಿ ಹೆಬ್ರಿ ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿ 169ಎ ಕಾಮಗಾರಿಗೆ ಅರಣ್ಯ ಪ್ರದೇಶದಲ್ಲಿದ್ದ ಮರ ಕಡಿಯಲು ಅನುಮತಿ

ಉಡುಪಿ ಹೆಬ್ರಿ ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿ 169ಎ ಕಾಮಗಾರಿಗೆ ಅರಣ್ಯ ಪ್ರದೇಶದಲ್ಲಿದ್ದ ಮರ ಕಡಿಯಲು ಅನುಮತಿ

ಉಡುಪಿ ಹೆಬ್ರಿ ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿ 169ಎ ಹೆಬ್ರಿ ಪರ್ಕಳ ಮಧ್ಯದ ಶಿವಪುರ ಮುಳ್ಳುಗುಡ್ಡೆ ಸಮೀಪ 1.2 ಕಿ.ಮೀ ರಸ್ತೆ ಅರಣ್ಯ ಇಲಾಖೆಯ ಜಾಗದಲ್ಲಿ ಹಾದು ಹೋಗುತ್ತಿದ್ದು, 2023 ರಿಂದ ಪರಿವೇಶ್ ವೆಬ್ಸೈಟ್ನಲ್ಲಿ ಅರಣ್ಯ ಇಲಾಖೆಯ ಅನುಮೋದನೆಗಾಗಿ ಬಹಳ ದಿನಗಳಿಂದ ಬಾಕಿಯಿದ್ದು ಇದೀಗ ಅನುಮತಿ ದೊರೆತಿದೆ.
ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಸತತ ಪ್ರಯತ್ನದಿಂದಾಗಿ ಕರ್ನಾಟಕ ರಾಜ್ಯ ಸರಕಾರದಿಂದ ಉಡುಪಿ ತಾಲ್ಲೂಕಿನ ಪೆರ್ಡೂರು ಗ್ರಾಮದ 2.35 ಹೆಕ್ಟೇರ್ ಪ್ರದೇಶ ಹಾಗೂ ಹೆಬ್ರಿ ಗ್ರಾಮದ 0.064 ಹೆಕ್ಟೇರ್ ಒಟ್ಟಾರೆ 2.49 ಹೆಕ್ಟೇರ್ ಅರಣ್ಯ ಪ್ರದೇಶವನ್ನು ರಾಷ್ಟ್ರೀಯ ಹೆದ್ದಾರಿ ಇಲಾಖೆಗೆ ಹೆದ್ದಾರಿ ಕಾಮಗಾರಿ ನಿರ್ವಹಿಸಲು ಅನುಮೋದನೆ ನೀಡಲಾಗಿದೆ.

ಕಾಮಗಾರಿಯನ್ನು ಕೂಡಲೇ ಪ್ರಾರಂಭಿಸಲು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ಸೂಚಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments