ಕುಚ್ಚೂರು : ಕುಚ್ಚೂರು ಗ್ರಾಮ ಪಂಚಾಯತಿ ವತಿಯಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ 15ನೇ ಹಣಕಾಸು ಆಯೋಗದ ಅನುದಾನ ಹಾಗೂ ರಾಜ್ಯ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮ ಸಭೆಯು ಮಂಗಳವಾರ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ನಡೆಯಿತು.
ಸಭೆಯ ಮಾರ್ಗದರ್ಶಿ ಅಧಿಕಾರಿಯಾಗಿ ಕಾರ್ಕಳ ತಾಲ್ಲೂಕು ದೈಹಿಕ ಪರಿವೀಕ್ಷಣ ಅಧಿಕಾರಿ ರವಿಚಂದ್ರ ಕಾರಂತ್ ಭಾಗವಹಿಸಿದ್ದರು.
ಪಿ.ಡಿ.ಒ ರಿತೇಶ್ ಎನ್. ಪುತ್ರನ್, ಸಾಮಾಜಿಕ ಪರಿಶೋಧನಾ ತಂಡದ ಸಂಪನ್ಮೂಲ ವ್ಯಕ್ತಿ ಪ್ರವೀಣ್ ಆಚಾರ್ಯ, ತಾಂತ್ರಿಕ ಸಂಯೋಜಕ ಪ್ರದೀಪ್ ಹೆಗ್ಡೆ, ಕಾರ್ಯದರ್ಶಿ ಸುಶೀಲ, ಗ್ರಾಮಸ್ಥರು ಉಪಸ್ಥಿತರಿದ್ದರು.
ರಿತೇಶ್ ಎನ್ ಪುತ್ರನ್ ಸ್ವಾಗತಿಸಿ, ನಿರೂಪಿಸಿದರು.


