ಹೆಬ್ರಿ : ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ್ ಸಂಬಂಧಿತ ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಧನ್ವಿತ್ ಶೆಟ್ಟಿ, ನಿತೀಶ್, ಸಂಭ್ರಮ್, ಅನೀಶ್, ರಜತ್, ಅದಿತಿ ನಾಯ್ಕ, ಪ್ರಾರ್ಥನಾ, ಕೃತಿಕಾ, ದಾಶ್ಮಿ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಪಡೆದಿದ್ದಾರೆ.
ಚಕ್ರ ಎಸೆತ, ಜಾವೆಲಿನ್ ತ್ರೊ ನಲ್ಲಿ ಪ್ರಥಮ ಮತ್ತು ಗುಂಡೆಸೆತದಲ್ಲಿ ದ್ವಿತೀಯ ಸ್ಥಾನವನ್ನು ಪಡೆದ 10ನೇ ತರಗತಿಯ ನಿತೀಶ್ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ, ಚಾಂಪಿಯನ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾನೆ. ವಿದ್ಯಾರ್ಥಿಗಳನ್ನು ಮತ್ತು ತರಬೇತಿ ನೀಡಿದ ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ನಿಶಾನ್ ಶೆಟ್ಟಿ ಸಾಧಕರನ್ನು ವಿದ್ಯಾಲಯದ ಆಡಳಿತ ಮಂಡಳಿ ಅಧ್ಯಕ್ಷ ಶೈಲೇಶ್ ಕಿಣಿ ಮತ್ತು ಮುಖ್ಯ ಶಿಕ್ಷಕಿ ಅಪರ್ಣಾ ಆಚಾರ್ ಅಭಿನಂದಿಸಿದ್ದಾರೆ.


