Sunday, August 9, 2026
Homeಕಾರ್ಕಳಕಾರ್ಕಳ ವಿಧಾನಸಭಾ ಕ್ಷೇತ್ರದ 2 ಸೇತುವೆಗಳ ನಿರ್ಮಾಣಕ್ಕೆ ₹5 ಕೋಟಿ ಅನುದಾನ ಬಿಡುಗಡೆ - ವಿ...

ಕಾರ್ಕಳ ವಿಧಾನಸಭಾ ಕ್ಷೇತ್ರದ 2 ಸೇತುವೆಗಳ ನಿರ್ಮಾಣಕ್ಕೆ ₹5 ಕೋಟಿ ಅನುದಾನ ಬಿಡುಗಡೆ – ವಿ ಸುನಿಲ್‌ ಕುಮಾರ್

ಕಾರ್ಕಳ ವಿಧಾನಸಭಾ ಕ್ಷೇತ್ರದ ರಸ್ತೆ ಮತ್ತು ಸೇತುವೆ ಮೂಲಸೌಕರ್ಯ ಅಭಿವೃದ್ಧಿಗೆ ಮತ್ತೊಂದು ಮಹತ್ವದ ಹೆಜ್ಜೆಯಾಗಿ, ಕ್ಷೇತ್ರದ 2 ಪ್ರಮುಖ ಸೇತುವೆಗಳ ನಿರ್ಮಾಣಕ್ಕಾಗಿ ರಾಜ್ಯ ಸರ್ಕಾರವು ಒಟ್ಟು ₹5.00 ಕೋಟಿ ಅನುದಾನವನ್ನು ಬಿಡುಗಡೆ ಮಾಡಿದೆ.

03 ಕೋಟಿ ರೂಪಾಯಿ ವೆಚ್ಚದಲ್ಲಿ ಪಶ್ಚಿಮ ಘಟ್ಟದ ತಪ್ಪಲಿನ್ಲಿರುವ ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ಕೂಡ್ಲು ಬೀರನ್‌ಬೈಲು ಪ್ರದೇಶದ ಜನರ ಬಹು ಬೇಡಿಕೆಯಾದ ಸೇತುವೆ ಹಾಗೂ 02 ಕೋಟಿ ರೂಪಾಯಿ ವೆಚ್ಚದಲ್ಲಿ ಮರ್ಣೆ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಹೆರ್ಮುಂಡೆ ಪ್ರದೇಶದಲ್ಲಿ ಸೇತುವೆ ನಿರ್ಮಾಣಗೊಳ್ಳಲಿದೆ.

ಈ ಎರಡೂ ಸೇತುವೆಗಳು ಜನರ ಬಹುದಿನಗಳ ಬೇಡಿಕೆಯಾಗಿದ್ದು, ಸೇತುವೆಗಳ ನಿರ್ಮಾಣಕ್ಕೆ ವಿಶೇಷ ಅನುದಾನ ನೀಡುವಂತೆ ಸರ್ಕಾರಕ್ಕೆ ಹಾಗೂ ಇಲಾಖಾ ಸಚಿವರಿಗೆ ಪತ್ರ ಮುಖೇನ ಮನವಿ ಮಾಡಲಾಗಿತ್ತು. ಇದರ ಪರಿಣಾಮವಾಗಿ ಕಾರ್ಕಳ ವಿಧಾನ ಸಭಾ ಕ್ಷೇತ್ರಕ್ಕೆ 05.00 ಕೋಟಿ ರೂ ಅನುದಾನ ಬಿಡುಗಡೆಯಾಗಿದ್ದು ಆದಷ್ಟು ಶೀಘ್ರವಾಗಿ ಇಲಾಖಾ ಪ್ರಕ್ರಿಯೆಗಳನ್ನು ಮುಗಿಸಿ ಕಾಮಗಾರಿಗಳನ್ನು ಆರಂಭಿಸಲಾಗುವುದು ಎಂದು ವಿಕಾಸ ಶಾಸಕರ ಜನಸೇವಾ ಕಛೇರಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments