Monday, August 10, 2026
HomeUncategorizedಮರವಂತೆ ಪ್ರೌಢಶಾಲೆಯಲ್ಲಿ ಮಿದುಳು ಆರೋಗ್ಯದ ಜಾಗೃತಿ ಕಾರ್ಯಕ್ರಮ.

ಮರವಂತೆ ಪ್ರೌಢಶಾಲೆಯಲ್ಲಿ ಮಿದುಳು ಆರೋಗ್ಯದ ಜಾಗೃತಿ ಕಾರ್ಯಕ್ರಮ.

ಮರವಂತೆ : ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಜಿಲ್ಲಾ ಆಸ್ಪತ್ರೆ ಉಡುಪಿ, ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ (ಕಭೀ), ಇದರ ಆಶ್ರಯದಲ್ಲಿ ವಿಶ್ವ ಮೆದುಳು ದಿನಾಚರಣೆ ಯ ಜಾಗೃತಿ ಕಾರ್ಯಕ್ರಮ ಸೋಮವಾರ
ಮರವಂತೆ ಪ್ರೌಢಶಾಲೆಯಲ್ಲಿ ನಡೆಯಿತು.

ಮಿದುಳು ಆರೋಗ್ಯದ ಕುರಿತು ಜಾಗೃತಿ ನೀಡಲಾಯಿತು. ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳು ಬೆಂಕಿಯಿಲ್ಲದೆ ಅಡುಗೆ ಸ್ಪರ್ಧೆ, ಪೋಸ್ಟರ್ ಸ್ಪರ್ಧೆ ಮತ್ತು ಮೋಜಿನ ಶೈಕ್ಷಣಿಕ ಆಟಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದರು. ಮೆದುಳಿನ ಆರೋಗ್ಯ ಮತ್ತು ಆರೋಗ್ಯಕರ ಜೀವನಶೈಲಿ ಅಭ್ಯಾಸಗಳ ಮಹತ್ವವನ್ನು ತಿಳಿಸಿ ಕಭೀ ಕಾರ್ಯಕ್ರಮದ ಬಗ್ಗೆ ಜಾಗೃತಿ ಮೂಡಿಸಲಾಯಿತು.

ಬೆಂಕಿ ಇಲ್ಲದೆ ಅಡುಗೆ ಮತ್ತು ಪೋಸ್ಟರ್ ಸ್ಪರ್ಧೆಗಳ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.ಕಾರ್ಯಕ್ರಮವನ್ನು ಜಿಲ್ಲಾ ಸಂಯೋಜಕಿ ಅರ್ಪಿತಾ, ಯಶಸ್ವಿನಿ (ಭೌತಚಿಕಿತ್ಸಕ) ಮತ್ತು ರಕ್ಷಿತಾ (ಕ್ಲಿನಿಕಲ್ ಸೈಕಾಲಜಿಸ್ಟ್) ನಿರ್ವಹಿಸಿದರು.

ಮರವಂತೆ ಪ್ರೌಢಶಾಲೆಯ ಪ್ರಾಂಶುಪಾಲರು, ಶಿಕ್ಷಕರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments