ಹೆಬ್ರಿ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕಾರ್ಕಳ ಸಹಯೋಗದೊಂದಿಗೆ ಸರ್ಕಾರಿ ಪ್ರೌಢಶಾಲೆ ಶಿವಪುರದಲ್ಲಿ ಬುಧವಾರ ನಡೆದ ಹೆಬ್ರಿ ಕಾರ್ಕಳ ತಾಲ್ಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಚೆಸ್ ಪಂದ್ಯಾಟದಲ್ಲಿ ಹೆಬ್ರಿ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ 9ನೇ ತರಗತಿ ವಿದ್ಯಾರ್ಥಿ ಅಶ್ವಿನ್ ಇವನು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿ ಸಾಧನೆಗೆ ಶಾಲೆ ಉಪಪ್ರಾಂಶುಪಾಲ ದಿವಾಕರ ಮರಕಾಲ ಹಾಗೂ ಎಲ್ಲಾ ಶಿಕ್ಷಕರು ಹಾಗೂ ಎಸ್ ಡಿ.ಎಮ್ ಸಿ ಅಧ್ಯಕ್ಷ ವಿಜೇಂದ್ರ ಶೆಟ್ಟಿ ಹಾಗೂ ಸರ್ವ ಸದಸ್ಯರು ಅಭಿನಂದನೆ ಸಲ್ಲಿಸಿರುತ್ತಾರೆ.


