Sunday, August 9, 2026
Homeಶಿವಪುರ ಗ್ರಾಮ ಪಂಚಾಯತ್‌ಶಿವಪುರ ಸರ್ಕಾರಿ ಪ್ರೌಢಶಾಲೆಯಲ್ಲಿ ಹೆಬ್ರಿ ತಾಲ್ಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಚೆಸ್ ಪಂದ್ಯಾಟ.

ಶಿವಪುರ ಸರ್ಕಾರಿ ಪ್ರೌಢಶಾಲೆಯಲ್ಲಿ ಹೆಬ್ರಿ ತಾಲ್ಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಚೆಸ್ ಪಂದ್ಯಾಟ.

ಶಿವಪುರ : ಉಡುಪಿ ಜಿಲ್ಲಾ ಪಂಚಾಯತಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಕಾರ್ಕಳ ಹಾಗೂ ಶಿವಪುರ ಸರ್ಕಾರಿ ಪ್ರೌಢಶಾಲೆಯ ಆಶ್ರಯದಲ್ಲಿ ಹೆಬ್ರಿ ಕಾರ್ಕಳ ತಾಲ್ಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಚೆಸ್ ಪಂದ್ಯಾಟವು ಬುಧವಾರ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಘವೇಂದ್ರ ಅಡಿಗ ವಹಿಸಿದ್ದರು. ಶಿವಪುರ ಗ್ರಾಮ ಪಂಚಾಯತಿ ನಿಕಟಪೂರ್ವ ಅಧ್ಯಕ್ಷೆ ಶೋಭಾ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಹೆಬ್ರಿ ತಾಲ್ಲೂಕು ಪಂಚಾಯತಿ ಮಾಜಿ ಅಧ್ಯಕ್ಷ ರಮೇಶ್ ಕುಮಾರ್, ಶಿವಪುರ ಗ್ರಾಮ ಪಂಚಾಯತಿ ಮಾಜಿ ಉಪಾಧ್ಯಕ್ಷ ಶಂಕರ ಬಡ್ಕಿಲ್ಲಾಯ, ಮಾಜಿ ಗ್ರಾಮ ಪಂಚಾಯತಿ ಸದಸ್ಯೆ ಸುಮಿತ್ರಾ ನಾಯ್ಕ, ಶಿವಪುರ ಶಾಲೆಯ ಶಿಕ್ಷಕ ರಮಾನಂದ ಶೆಟ್ಟಿ, ಪಡುಕುಡೂರು ಶಾಲೆಯ ಮುಖ್ಯ ಶಿಕ್ಷಕ ಹರೀಶ ಪೂಜಾರಿ ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ಪರಿವೀಕ್ಷಕ ರವಿಚಂದ್ರ ಕಾರಂತ್ ಪ್ರಾಸ್ತಾವಿಕ ಮಾತನಾಡಿದರು. ಮಖ್ಯ ಶಿಕ್ಷಕಿ ಶರ್ಮಿಳ ಸ್ವಾಗತಿಸಿದರು.

ದೈಹಿಕ ಶಿಕ್ಷಣ ಶಿಕ್ಷಕಿ ಯಶೋದಾ ವಂದಿಸಿದರು. ಶಿಕ್ಷಕ ಗಣೇಶ ಮರಕಾಲ ನಿರೂಪಿಸಿದರು. ವಿವಿಧ ಶಾಲೆಗಳಿಂದ ಸುಮಾರು 200 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಚೆಸ್ ಪಂದ್ಯಾಕೂಟದಲ್ಲಿ ಪಾಲ್ಗೊಂಡರು. 17 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಕೃಶಾಂಗ್ ಪ್ರಭು,ವರುಣ್ ಕೆ ಕಾಮತ್, ಅಶ್ವಿನ್ ಎಸ್, ಜೀತ್ ನಾಯಕ್, ಅಮಯ್ ಎ ಪೂಜಾರಿ. 17 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಮೌಲ್ಯ, ಸಾನ್ವಿ, ಜೇಷ್ಠ ಕೆ ನಾಯಕ್, ಸನ್ನಿಧಿ, ಅವನಿ ಆರ್ ಶೆಟ್ಟಿ ವಿಜೇತರಾಗಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾದರು.

14 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಮೋಹಿತ್, ತಶ್ವಿನ್,ವಿದ್ವತ್ ಸಮೃದ್ದ್ ಭಂಡಾರಿ, ಪ್ರಜ್ವಲ್ ವಿಶ್ವನಾಥ್ ಚೌವಾನ್ ಆಯ್ಕೆಯಾದರು, 14 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಕಶ್ವಿ ಜೆ, ಯಾಶ್ನಿ, ಶೃತಿ ಆಚಾರ್ಯ, ವೈಶ್ಣವಿ, ಸುದೀಕ್ಷಾ ನಾಯಕ್ ಆಯ್ಕೆ ಯಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments