*ಆರೋಪಿ ಪತ್ತೆಗಾಗಿ ಶೋಧ….*
*ಸ್ಥಳಕ್ಕೆ ಬೇಟಿ ನೀಡಿದ ಎಸ್‌ಪಿ… ಪೋಲಿಸರ ತಂಡ..*
*ಹೆಬ್ರಿಯಲ್ಲಿ ವಾಸವಿದ್ದ ಐವನ್ ರಿಚಾರ್ಡ್ ಮಸ್ಕರೇನಸ್…!*
ಕುಂದಾಪುರ : ಉಡುಪಿ ಜಿಲ್ಲೆಯ ಕುಂದಾಪುರದ ಚರ್ಚ್ ರಸ್ತೆಯಲ್ಲಿ ರೌಡಿಯೋರ್ವನ ಪಿಸ್ತೂಲ್‌ನಿಂದ ಗುಂಡಿಕ್ಕಿ ಹತ್ಯೆಗೈದ ಘಟನೆ ಶುಕ್ರವಾರ ನಸುಕಿನ ವೇಳೆ ನಡೆದಿದೆ.
ಮೃತರನ್ನು ಐವನ್ ರಿಚಾರ್ಡ್ ಮಸ್ಕರೇನಸ್ (ಮುನ್ನಾ) ಎಂದು ಗುರುತಿಸಲಾಗಿದೆ. ಈತ ಪಿಟ್ಟಿ ನಾಗೇಶ್ ಮರ್ಡರ್ ಕೇಸ್ ನಲ್ಲಿ ಆರೋಪಿಯಾಗಿದ್ದ ಎನ್ನಲಾಗಿದೆ.
ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡ ಅವರು ತಮ್ಮ ಕಾರಿನ ಸಮೀಪ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹತ್ಯೆಗೆ ಕಾರಣವೇನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಆರೋಪಿಗಳ ಪತ್ತೆಗೆ ಶೋಧ ಆರಂಭಿಸಿದ್ದಾರೆ. ಮೃತ ಐವನ್ ರಿಚಾರ್ಡ್ ಮಸ್ಕರೇನಸ್ (ಮುನ್ನಾ) ಹೆಬ್ರಿಯ ಗಿಲ್ಲಾಳಿಯಲ್ಲಿ ಜಮೀನು ಖರೀದಿಸಿ ಮನೆ ಮಾಡಿಕೊಂಡು ವಾಸವಿದ್ದರು. ಮುಂಜಾನೆ ೩:೩೦ ರ ಹೊತ್ತಿಗೆ ಗುಂಡಿಟ್ಟು ಹತ್ಯೆ ಮಾಡಲಾಗಿದೆ. ಐವನ್ ರಿಚಾರ್ಡ್ ಮಸ್ಕರೇನಸ್ (ಮುನ್ನಾ) ಜತೆಗಿದ್ದ ಮಹಿಳೆ ಹತ್ಯೆ ಮಾಡಿದ ಆರೋಪಿಯನ್ನು ಗುರುತಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಉಡುಪಿ ಎಸ್ಪಿ ಹರಿರಾಂ ಶಂಕರ್, ಹೆಚ್ಚುವರಿ ಎಸ್ಪಿ ಸುಧಾಕರ್ ನಾಯಕ್, ಡಿವೈಎಸ್ಪಿ ಎಚ್.ಡಿ. ಕುಲಕರ್ಣಿ, ಕುಂದಾಪುರ ನಗರ ಠಾಣೆ ಇನ್ಸ್‌ಪೆಕ್ಟರ್ ಜಯರಾಮ ಗೌಡ, ಪಿಎಸ್ಐಗಳಾದ ನಂಜಾ ನಾಯ್ಕ್, ಪುಪ್ಪಾ, ಅನೂಪ್ ನಾಯಕ್ ಮೊದಲಾದವರು ಬೇಟಿ ನೀಡಿದ್ದಾರೆ. ಸೋಕೋ ತಂಡ ಬೇಟಿ ನೀಡಿ ಪರಿಶೀಲನೆ ನಡೆಸಿದೆ.


