Saturday, August 8, 2026
Homeಹೆಬ್ರಿಹೆಬ್ರಿ ಅಮೃತ ಭಾರತಿ ವಿದ್ಯಾಲಯದ ನಿತೀಶ್ ಎಸ್. ಜಾವೆಲಿನ್ ಥ್ರೋ ನಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ.

ಹೆಬ್ರಿ ಅಮೃತ ಭಾರತಿ ವಿದ್ಯಾಲಯದ ನಿತೀಶ್ ಎಸ್. ಜಾವೆಲಿನ್ ಥ್ರೋ ನಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ.

ಹೆಬ್ರಿ : ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ್ ಸಂಬಂಧಿತ ರಾಜ್ಯಮಟ್ಟದ ಕ್ರೀಡಾಕೂಟವು ಇತ್ತೀಚೆಗೆ ಕಲ್ಬುರ್ಗಿಯಲ್ಲಿ ನಡೆಯಿತು.

ಕ್ರೀಡಾಕೂಟದಲ್ಲಿ ಜಾವೆಲಿನ್ ಥ್ರೋ ನಲ್ಲಿ ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿ ನಿತೀಶ್ ಎಸ್ ಚಿನ್ನದ ಪದಕವನ್ನು ಪಡೆದು ಪ್ರಥಮ ಸ್ಥಾನದೊಂದಿಗೆ ಆಂಧ್ರ ಪ್ರದೇಶದಲ್ಲಿ ನಡೆಯುವ ಕ್ಷೇತ್ರೀಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾನೆ.

ವಿದ್ಯಾರ್ಥಿಯನ್ನು ಮತ್ತು ತರಬೇತಿ ನೀಡಿದ ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ನಿಶಾನ್ ಶೆಟ್ಟಿ ಇವರನ್ನು ಸಂಸ್ಥೆಯ ಮುಖ್ಯಸ್ಥೆ ಅಪರ್ಣಾ ಆಚಾರ್ ಅಭಿನಂದಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments