ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಬೇಕು : ನಾಗರಾಜ್ ಶೆಟ್ಟಿ.
ಹೆಬ್ರಿ: ಎಸ್. ಆರ್. ಇಂಗ್ಲಿಷ್ ಮೀಡಿಯಂ ಸ್ಕೂಲ್ ನಲ್ಲಿ ಗುರುವಾರ ಶಾಲೆಯ ಎಸ್. ಆರ್. ಸಭಾಂಗಣದಲ್ಲಿ “ ಟ್ಯಾಲೆಂಟ್ ಫೆಸ್ಟ್” ಕಾರ್ಯಕ್ರಮವನ್ನು ನಡೆಯಿತು.
ವಿದ್ಯಾರ್ಥಿಗಳು ಪಠ್ಯಪುಸ್ತಕದ ಪಾಠಗಳನ್ನು ಅರ್ಥಮಾಡಿಕೊಂಡು ಓದುವುದರ ಜೊತೆಗೆ, ನಮ್ಮಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಲು ಸಾಧ್ಯ , ಸಿಕ್ಕಿರುವ ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಂಡು ತಮ್ಮ ಪ್ರತಿಭೆಯನ್ನು ಪ್ರದರ್ಶನ ಮಾಡಬೇಕು ಎಂದು ಎಸ್. ಆರ್. ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಚ್. ನಾಗರಾಜ್ ಶೆಟ್ಟಿ ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಎಸ್ ಆರ್ ಸಮೂಹ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸಪ್ನಾ ಎನ್ ಶೆಟ್ಟಿ ಅವರು ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ನಿಮ್ಮದೇ ಆದ ವಿಶಿಷ್ಟ ಪ್ರತಿಭೆಗಳು ಅಡಗಿದೆ. ಸೂಕ್ತ ವೇದಿಕೆಗಳು ದೊರೆತಾಗ ಮಾತ್ರ ಅದು ತಿಳಿಯುತ್ತದೆ. ಪ್ರತಿಯೊಬ್ಬರು ಭಾಗವಹಿಸಿ ಎಲ್ಲರೂ ಅವಕಾಶವನ್ನು ಬಳಸಿಕೊಳ್ಳಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಎಸ್.ಆರ್ ಪಬ್ಲಿಕ್ ಸ್ಕೂಲಿನ ಪ್ರಾಂಶುಪಾಲೆ ಭಗವತಿ, ಉಪಪ್ರಾಂಶುಪಾಲ ದೀಪಕ್ ಎನ್, ಎಸ್.ಆರ್. ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಗೋಪಾಲ ಆಚಾರ್ಯ, ಕೋಓರ್ಡಿನೇಟರ್ ಸುಚಿತ್ರ, ವಿನಯಾ ಅವರು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನವು ನಡೆಯಿತು. ವಿದ್ಯಾರ್ಥಿಗಳಾದ ವೈಭವ್ ನಿರೂಪಿಸಿ, ಮನೀಶ್ ಬಾಬು ಸ್ವಾಗತಿಸಿ, ಶಮಿತಾ ವಂದಿಸಿದರು.


