Saturday, August 8, 2026
HomeUncategorizedಕೊಲ್ಲೂರಿನಲ್ಲಿ ದಲಿತ ದೌರ್ಜನ್ಯ ಹಾಗೂ ಕೊಲೆ ಯತ್ನ ಪ್ರಕರಣ ದಾಖಲು, ಮೂವರು ಬಂಧನ

ಕೊಲ್ಲೂರಿನಲ್ಲಿ ದಲಿತ ದೌರ್ಜನ್ಯ ಹಾಗೂ ಕೊಲೆ ಯತ್ನ ಪ್ರಕರಣ ದಾಖಲು, ಮೂವರು ಬಂಧನ

ಕೊಲ್ಲೂರು: ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ಳಾಲ ಗ್ರಾಮದಲ್ಲಿ ನಡೆದ ಘಟನೆಯ ಸಂಬಂಧ ಪರಸ್ಪರ ದೂರುಗಳು ದಾಖಲಾಗಿದ್ದು, ದಲಿತ ದೌರ್ಜನ್ಯ ಹಾಗೂ ಕೊಲೆ ಯತ್ನ ಪ್ರಕರಣಗಳಲ್ಲಿ ಒಟ್ಟು ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಆಗಸ್ಟ್‌ 6ರಂದು ನೊಂದ ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ, ಸನತ್‌ ಕುಂದಾಪುರ ಎಂಬಾತ ಮಹಿಳೆಯ ಮನೆ ಸಮೀಪ ಬಂದು ಮಾನಕ್ಕೆ ಧಕ್ಕೆ ಉಂಟಾಗುವಂತೆ ವರ್ತಿಸಿ ಜಾತಿ ನಿಂದನೆ ನಡೆಸಿದ್ದಾನೆ ಎಂದು ಆರೋಪಿಸಿ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 51/2026ರಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ಅತ್ಯಾಚಾರ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಈ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.

ಇದೇ ಘಟನೆಯ ವೇಳೆ, ಮಹಿಳೆಯ ಕುಟುಂಬಸ್ಥರು ತನ್ನನ್ನು ಕಟ್ಟಿ ಹಲ್ಲೆ ನಡೆಸಿದ್ದಾರೆ ಎಂದು ಸನತ್‌ ಕುಂದಾಪುರ ನೀಡಿದ ದೂರಿನ ಮೇರೆಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 52/2026ರಡಿ ಕೊಲೆ ಯತ್ನ ಸೇರಿದಂತೆ ವಿವಿಧ ಕಲಂಗಳಡಿ ಮತ್ತೊಂದು ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಎರಡೂ ಪ್ರಕರಣಗಳ ತನಿಖೆ ಮುಂದುವರಿದಿದ್ದು, ಉಳಿದ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments