Monday, August 10, 2026
Homeಹೆಬ್ರಿಹೆಬ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 90 ಗಂಟೆಗಳ “UNXT” ಉದ್ಯೋಗ ಕೌಶಲ್ಯ ತರಬೇತಿ ಕಾರ್ಯಕ್ರಮ.

ಹೆಬ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 90 ಗಂಟೆಗಳ “UNXT” ಉದ್ಯೋಗ ಕೌಶಲ್ಯ ತರಬೇತಿ ಕಾರ್ಯಕ್ರಮ.

ಹೆಬ್ರಿ : ಕಾಲೇಜು ವಿದ್ಯಾರ್ಥಿಗಳಲ್ಲಿ ಉದ್ಯೋಗಪರ ಕೌಶಲ್ಯಗಳನ್ನು ಅಭಿವೃದ್ಧಿಪಡಿಸುವ ಉದ್ದೇಶದಿಂದ ಹೆಬ್ರಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 90 ಗಂಟೆಗಳ ಉದ್ಯೋಗ ಕೌಶಲ್ಯ ತರಬೇತಿ ಕಾರ್ಯಕ್ರಮ “UNXT” ಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು. ಪ್ಲೇಸ್‌ಮೆಂಟ್ ಸೆಲ್ ಹಾಗೂ ಐಕ್ಯೂಎಸಿ, ಉನ್ನತಿ ಫೌಂಡೇಶನ್ ಸಹಯೋಗದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಸಿಡಿಸಿ ಸದಸ್ಯ ಎಚ್. ಶಶಿಧರ ಶೆಣೈ‌ ಇಂತಹ ಉದ್ಯೋಗ ಕೌಶಲ್ಯ ತರಬೇತಿಗಳು ವಿದ್ಯಾರ್ಥಿಗಳಿಗೆ ಕಾರ್ಪೊರೇಟ್ ಕ್ಷೇತ್ರದಲ್ಲಿ ಉತ್ತಮ ಉದ್ಯೋಗಾವಕಾಶಗಳನ್ನು ಪಡೆಯಲು ಸಹಕಾರಿಯಾಗುತ್ತವೆ ಎಂದರು.

ಕಾಲೇಜಿನ ಪ್ರಾಂಶುಪಾಲ ಡಾ. ವಿದ್ಯಾಧರ ಹೆಗ್ಡೆ ಎಸ್. ಮಾತನಾಡಿ, ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡುವ ಇಂಗ್ಲಿಷ್, ನಾಯಕತ್ವ ಕೌಶಲ್ಯ, ಸಂವಹನ ಕೌಶಲ್ಯ ಹಾಗೂ ಸಂದರ್ಶನ ಎದುರಿಸುವ ತಂತ್ರಗಳು ಸೇರಿದಂತೆ ಉದ್ಯೋಗ ಕ್ಷೇತ್ರಕ್ಕೆ ಅಗತ್ಯವಾದ ವಿವಿಧ ಕೌಶಲ್ಯಗಳನ್ನು ಕಲಿಸಲಾಗುತ್ತದೆ. ವಿದ್ಯಾರ್ಥಿಗಳನ್ನು ಭವಿಷ್ಯದ ಉದ್ಯೋಗ ಕ್ಷೇತ್ರದ ಅಗತ್ಯತೆಗಳಿಗೆ ಸಜ್ಜುಗೊಳಿಸುವಲ್ಲಿ ಈ ತರಬೇತಿ ಕಾರ್ಯಕ್ರಮವು ಮಹತ್ವದ ಪಾತ್ರ ವಹಿಸಲಿದೆ ಎಂದರು.

ತರಬೇತುದಾರ ಕೆ. ಗುರುಪ್ರಸಾದ್ ಭಟ್ ಸಮಗ್ರ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಪ್ಲೇಸ್‌ಮೆಂಟ್ ಸೆಲ್ ಸಂಯೋಜಕ ಡಾ. ಮೇವಿ ಮಿರಾಂಡಾ, ಐಕ್ಯೂಎಸಿ ಸಂಯೋಜಕ ಡಾ. ಗಣೇಶ್ ಎಸ್., ವಿದ್ಯಾರ್ಥಿ ಕಲ್ಯಾಣಾಧಿಕಾರಿ ಸುಷ್ಮಾ ರಾವ್ ಕೆ., ಪ್ಲೇಸ್‌ಮೆಂಟ್ ಸೆಲ್ ಕಾರ್ಯದರ್ಶಿ ಸಂಜನಾ ಹಾಗೂ ಅಂತಿಮ ವರ್ಷದ ಬಿ.ಎ ಮತ್ತು ಬಿ.ಕಾಂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿದ್ಯಾರ್ಥಿ ಅಥ್ಮಿಕ ನಿರೂಪಿಸಿದರು. ವಿದ್ಯಾರ್ಥಿನಿಯಾದ ಪ್ಲೇಸ್‌ಮೆಂಟ್ ಸೆಲ್ ಕಾರ್ಯದರ್ಶಿ ಸಂಜನಾ ಸ್ವಾಗತಿಸಿದರು. ವಿದ್ಯಾರ್ಥಿನಿ ಲಕ್ಷ್ಯಾ ವಂದಿಸಿದರು.

 

 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments