ಹೆಬ್ರಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹೆಬ್ರಿ ತಾಲ್ಲೂಕು ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮ ವಾತ್ಸಲ್ಯ ಯೋಜನೆ ಅಡಿಯಲ್ಲಿ ಮಾಶಾಸನ ಪಡೆಯುತ್ತಿರುವ ಫಲಾನುಭವಿಗಳ 14 ಮಕ್ಕಳಿಗೆ ಅಧ್ಯಯನಕ್ಕೆ ಅಗತ್ಯವಿರುವ ಸಾಮಗ್ರಿ ಗಳಾದ ಬ್ಯಾಗ್, ಪುಸ್ತಕ, ಛತ್ರಿ,ಚಪ್ಪಲ್ ಇತ್ಯಾದಿ ಸಾಮಗ್ರಿಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಧರ್ಮಸ್ಥಳ ಕೇಂದ್ರ ಕಚೇರಿಯ ಜ್ಞಾನ ವಿಕಾಸ ವಿಭಾಗದ ನಿರ್ದೇಶಕ ದಿನೇಶ್ ನೆರವೇರಿಸಿ ವಾತ್ಸಲ್ಯ ಕಾರ್ಯಕ್ರಮದ ಉದ್ದೇಶ ಹಾಗೂ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಡಾ ಹೇಮಾವತಿ ವಿ ಹೆಗ್ಗಡೆ ಯವರ ಕಲ್ಪನೆಯಲ್ಲಿ ಅಸಹಾಯಕರಿಗೆ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಮಾಶಾಸನ ಫಲಾನುಭವಿ ಮಕ್ಕಳಿಗೆ ವಿದ್ಯಾನಿಧಿ ನೀಡುತ್ತಿದ್ದು, ಇತರ ಮಕ್ಕಳಂತೆ ಅವರು ಕೂಡ ಉತ್ತಮ ರೀತಿಯಲ್ಲಿ ಇರಬೇಕು ಎಂಬ ಉದ್ದೇಶದಿಂದ ನೀಡಲಾಗುತ್ತಿದೆ. ಎಲ್ಲ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯುವಂತಾಗಲಿ ಎಂದು ಮಾರ್ಗದರ್ಶನ ನೀಡಿದರು. ಹೆಬ್ರಿ ತಾಲ್ಲೂಕು ಯೋಜನಾಧಿಕಾರಿ ರೇಷ್ಮಾ, ಹೆಬ್ರಿ ವಲಯದ ಅಧ್ಯಕ್ಷೆ ಶಾಲಿನಿ ಭಂಡಾರಿ, ಹೆಬ್ರಿ ತಾಲ್ಲೂಕಿನ ಶೌರ್ಯ ವಿಪತ್ತು ಘಟಕದ ಕ್ಯಾಪ್ಟನ್ ಸುರೇಶ್ ಭಂಡಾರಿ, ಕಚೇರಿ ಪ್ರಬಂಧಕ ಗುರುಪ್ರಸಾದ್ ಉಪಸ್ಥಿತರಿದ್ದರು. ಜ್ಞಾನ ವಿಕಾಸ ಸಮನ್ವಯಧಿಕಾರಿ ಚಂದ್ರಾವತಿ ನಿರೂಪಿಸಿದರು ಸೇವಾ ಪ್ರತಿನಿಧಿ ಕಾಂತಿ ಹೆಗ್ಡೆ ಸ್ವಾಗತಿಸಿ ಮೇಲ್ವಿಚಾರಕ ಉದಯ್ ವಂದಿಸಿದರು.



