Wednesday, August 19, 2026
Homeಹೆಬ್ರಿಹೆಬ್ರಿ ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘದ ಸಮುದಾಯ ಭವನಕ್ಕೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ....

ಹೆಬ್ರಿ ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘದ ಸಮುದಾಯ ಭವನಕ್ಕೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಭೇಟಿ.

ಹೆಬ್ರಿ : ಹೆಬ್ರಿ ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘದ ಸಮುದಾಯ ಭವನದ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸಲು ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಗೆ ಮನವಿ ನೀಡಿದ ಹಿನ್ನಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದೇ ಸಂದರ್ಭದಲ್ಲಿ ಹಾಜರಿದ್ದ ರಾಜ್ಯದ ನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿಯವರು ಹೆಬ್ರಿ ಶ್ರೀ ವಿಶ್ವಕರ್ಮ ಸಮುದಾಯಕ್ಕೆ ಸಮುದಾಯ ಭವನದ ತುರ್ತು ಅವಶ್ಯಕತೆ ಇದ್ದು ಸಮಸ್ಯೆಯನ್ನು ಬಗೆಹರಿಸುವಂತೆ ವಿನಂತಿಸಿದರು. ಹೆಬ್ರಿ ತಹಶೀಲ್ಧಾರ್‌ ರಾಕೇಶ್‌ ಫ್ರಾನ್ಸಿಸ್‌ ಬ್ರೀಟ್ಟೋ, ಕಂದಾಯ ಮತ್ತು ಭೂಮಾಪನ ಇಲಾಖೆಯ ಅಧಿಕಾರಿಗಳು, ಹೆಬ್ರಿ ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘದ ಅಧ್ಯಕ್ಷ ಮುದ್ರಾಡಿ ಕೇಶವ ಆಚಾರ್ಯ ಹಾಗೂ ವಿವಿಧ ಪದಾಧಿಕಾರಿಗಳು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments