ಮುದ್ರಾಡಿ : ಮುದ್ರಾಡಿ ನೆಲ್ಲಿಕಟ್ಟೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು .
ಎಸ್ ಡಿ ಎಂಸಿ ಅಧ್ಯಕ್ಷರಾದ ಸುನೀತ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದರು. ಮಕ್ಕಳಿಂದ ವಿವಿಧ ಸಾಂಸ್ಕೃತಿಕಾರ್ಯಕ್ರಮ ನೆರವೇರಿತು. ಈ ಸಂದರ್ಭದಲ್ಲಿ ರಾಜ್ಯದ ನಾರಾಯಣಗುರು ಅಭಿವೃದ್ಧಿ ನಿಗಮ ಮಂಡಳಿಯ ರಾಜ್ಯ ಅಧ್ಯಕ್ಷರಾದ ಮುದ್ರಾಡಿ ಮಂಜುನಾಥ ಪೂಜಾರಿ ಉಪಸ್ಥಿತರಿದ್ದರು.
ಶಾಲಾ ಮುಖ್ಯ ಗುರುಗಳಾದ ರವೀಂದ್ರ ಹೆಗ್ಡೆ ಸ್ವಾಗತಿಸಿದರು. ಶಾಲಾ ಶಿಕ್ಷಕಿ ಶೋಭ ಕುಮಾರಿ ವಂದಿಸಿದರು. ಶಾಲಾ ಶಿಕ್ಷಕಿಯರಾದ ನಂದಿನಿ, ಅಮೃತ ಹಾಗೂ ಅಕ್ಷರ ದಾಸೋಹ ಸಿಬ್ಬಂದಿಗಳು ಎಸ್ ಡಿ ಎಂಸಿ ಸದಸ್ಯರು ಪೋಷಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಸಹಕರಿಸಿದರು. ನೆಲ್ಲಿ ಕಟ್ಟಿ ಅಂಗನವಾಡಿ ಶಾಲೆಯ ಪುಟಾಣಿಗಳು ಹಾಗೂ ಕಾರ್ಯಕರ್ತೆ ವಿದ್ಯಾ ಅಂಗನವಾಡಿ ಸಹಾಯಕಿ ಗೀತಾ ಕಾರ್ಯಕ್ರಮದ ಭಾಗವಹಿಸಿದರು.
ಮುದ್ರಾಡಿ ಗ್ರಾಮ ಪಂಚಾಯತ್ ಹಾಗೂ ಕಾಪೋಳಿ ಫ್ರೆಂಡ್ಸ್ ವತಿಯಿಂದ ಮಕ್ಕಳಿಗೆ ಸಿಹಿ ತಿಂಡಿ ವಿತರಣೆಯನ್ನು ಮಾಡಿದರು.



