ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ನಡೆಯಿತು.
ಅಮೃತ ಭಾರತಿ ಟ್ರಸ್ಟ್ ವಿಶ್ವಸ್ಥರಾದ ಹೆಚ್.ಯೋಗೀಶ್ ಭಟ್ ಧ್ವಜಾರೋಹಣ ನೆರವೇರಿಸಿ ಮಾತನಾಡಿ ಸ್ವಾತಂತ್ರ್ಯ ಹೋರಾಟಗಾರರ ದೇಶಸೇವೆಯೊಂದಿಗೆ ತೆರೆಮರೆಯಲ್ಲಿ ಸೇವೆಯನ್ನು ಮಾಡಿರುವ ಹಲವರಿದ್ದಾರೆ ಅವರನ್ನೂ ನಾವು ಸ್ಮರಿಸಬೇಕು. ಹಾಗೆಯೇ ದೇಶದ ಸೇವೆಯನ್ನು ಮಾಡಲು ಪ್ರತಿಯೊಬ್ಬ ವಿದ್ಯಾರ್ಥಿಯೂ ಕಟಿಬದ್ಧವಾಗಬೇಕು. ಅಲ್ಲದೆ ದೇಶದ ಬಗ್ಗೆ ಆತ್ಮಗೌರವದಿಂದ ನಿಸ್ವಾರ್ಥ ಸೇವೆ ಮಾಡಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಅಮೃತ ಭಾರತಿ ಟ್ರಸ್ಟ್ ಅಧ್ಯಕ್ಷ ಸಿಎ ಎಂ ರವಿರಾವ್, ಅಮೃತ ಭಾರತಿ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ರಾಜೇಶ್ ನಾಯಕ್, ಅಮೃತ ಭಾರತಿ ವಿದ್ಯಾಲಯದ ಅಧ್ಯಕ್ಷ ಶೈಲೇಶ್ ಕಿಣಿ, ವಿಶ್ವಸ್ಥರಾದ ಬಾಲಕೃಷ್ಣ ಮಲ್ಯ, ಸುದೀರ್ ನಾಯಕ್, ಲಕ್ಷ್ಮಣ ಭಟ್, ವಸತಿ ನಿಲಯದ ಸದಸ್ಯ ರಾಮಕೃಷ್ಣ ಆಚಾರ್ಯ, ಸಂಸ್ಥೆಯ ಮುಖ್ಯಸ್ಥರಾದ ಅರುಣ್ ಕುಮಾರ್ ಹೆಚ್ ವೈ, ಅಪರ್ಣಾ ಆಚಾರ್, ಶಕುಂತಲಾ , ಸಂಸ್ಥೆಯ ಪಿ ಆರ್ ಓ ವಿಜಯಕುಮಾರ್ ಶೆಟ್ಟಿ ಮತ್ತು ಅಮೃತ ಭಾರತಿ ಸಮೂಹ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಬೋಧಕ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.
ಸಂಸ್ಥೆಯ ಕನ್ನಡ ಉಪನ್ಯಾಸಕ ವೀಣೀಶ್ ಅಮೀನ್ ನಿರೂಪಿಸಿ, ಉಪನ್ಯಾಸಕ ಚಂದ್ರಹಾಸ ಸ್ವಾಗತಿಸಿ, ವಿದ್ಯಾರ್ಥಿಗಳಿಗೆ ಸಿಹಿ ಹಂಚಿ ಸಂಪನ್ನಗೊಂಡಿತು


