ಹೆಬ್ರಿ : ಹೆಬ್ರಿಯ ಕನ್ಯಾನ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು . ಎಸ್ ಡಿಎಂಸಿ ಅಧ್ಯಕ್ಷರಾದ ಸುಬ್ರಹ್ಮಣ್ಯ ದೇವಾಡಿಗ ಧ್ವಜಾರೋಹಣವನ್ನು ನೆರವೇರಿಸಿದರು.
ನಂತರ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.ಶಾಲಾ ಹಳೇ ವಿದ್ಯಾರ್ಥಿ ಸಂಘದ ಪದಾಧಿಕಾರಿಯಾದ ಶ್ರೀ ಕೃಷ್ಣ ಭಜನಾ ಮಂಡಳಿ ಕನ್ಯಾನದ ಅಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ, ವಯೋನಿವೃತ್ತಿ ಹೊಂದಿದ ಶಾಲಾ ಅಡುಗೆ ಸಿಬ್ಬಂದಿ ವನಜ ಪೂಜಾರ್ತಿ, ಶಾಲಾ ಹಳೆ ಸಂಘದ ಪದಾಧಿಕಾರಿ ಅರುಣ್ ಕುಮಾರ್ ಶೆಟ್ಟಿ, ಹೆಬ್ರಿ ಗ್ರಾಮ ಪಂಚಾಯತಿ ನಿಕಟಪೂರ್ವ ಸದಸ್ಯ ಸಂತೋಷ್ ನಾಯಕ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ,ಹಳೇ ವಿದ್ಯಾರ್ಥಿ ಸಂಘ, ಶಾಲಾ ಶಿಕ್ಷಕ ವೃಂದ, ಹಳೆ ವಿದ್ಯಾರ್ಥಿಗಳು, ಪೋಷಕರು,ವಿದ್ಯಾರ್ಥಿಗಳು ಊರ ಪರವೂರ ಮಹನೀಯರು ಪಾಲ್ಗೊಂಡಿದ್ದರು.



