Wednesday, August 19, 2026
Homeಶಿವಪುರ ಗ್ರಾಮ ಪಂಚಾಯತ್‌ಕೆರೆಬೆಟ್ಟು ಶಾಲೆಯಲ್ಲಿ ಇಂದು 80ನೇ ಸ್ವಾತಂತ್ರ್ಯೋತ್ಸವ.

ಕೆರೆಬೆಟ್ಟು ಶಾಲೆಯಲ್ಲಿ ಇಂದು 80ನೇ ಸ್ವಾತಂತ್ರ್ಯೋತ್ಸವ.

ಶಿವಪುರ : ಶಿವಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆರೆಬೆಟ್ಟು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮವನ್ನು ಅದ್ಧೂರಿಯಾಗಿ ನೆರವೇರಿಸಲಾಯಿತು,

ಧ್ವಜಾರೋಹಣವನ್ನು ಹೆಬ್ರಿ ಸಿಟಿ ಲಯನ್ಸ್ ಕ್ಲಬ್ ಅಧ್ಯಕ್ಷ ಹರೀಶ್ ಶೆಟ್ಟಿ ನಾಡ್ಪಾಲು ನೆರವೇರಿಸಿದರು.ಈ ಸಂದರ್ಭದಲ್ಲಿ ಶಾಲೆಯ ಹಳೆ ವಿದ್ಯಾರ್ಥಿ, ಶಾಲಾ ಅಮೃತ ಮಹೋತ್ಸವ ಸಮಿತಿಯ ಅಧ್ಯಕ್ಷರಾಗಿದ್ದ ಪಿ ನಾರಾಯಣ ಬಡ್ಕಿಲ್ಲಾಯ, ಹಾಗೂ ಹೆಬ್ರಿ ಸಿಟಿ ಲಯನ್ಸ್ ನ ವಿವಿಧ ಪದಾಧಿಕಾರಿಗಳು, ಶಾಲಾ ಹಳೆ ವಿದ್ಯಾರ್ಥಿಗಳು ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ನಂತರ ಶಾಲಾ ವಿದ್ಯಾರ್ಥಿಗಳಿಂದ ಮತ್ತು ಅಂಗನವಾಡಿ ಪುಟಾಣಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಸಂಪನ್ನಗೊಂಡವು.
ಸಭಾ ಕಾರ್ಯಕ್ರಮದಲ್ಲಿ ಶಾಲೆಯ ಹಳೆ ವಿದ್ಯಾರ್ಥಿ ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ರವಿಶಂಕರ್ ರಾವ್ ಕುಂದಾರು, ಶಿಕ್ಷಣ ಅಭಿಮಾನಿ, ದಾನಿ ಮೋಹನ್ ದಾಸ್ ನಾಯಕ್ ಮುರ್ಸಾಲು, ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶಂಕರ ಬಡ್ಕಿಲ್ಲಾಯ, ಉಪಾಧ್ಯಕ್ಷ ಉದಯ ಸೇರಿಗಾರ್ , ಹಿರಿಯ ಕೃಷಿಕ ಬಚ್ಚ ಹಾಂಡ, ಸಂಗೀತ ಗುರು ಸರಸ್ವತಿ, ಹೆಬ್ರಿ ಪೊಲೀಸ್ ಠಾಣೆಯ ಸಿಬ್ಬಂದಿ ಸುಜಾತ, ಶಾಲಾ ಎಸ್‌ಡಿಎಂಸಿ ಅಧ್ಯಕ್ಷೆ ಮಾಲತಿ ಪೂಜಾರಿ, ಶಾಲಾ ಮುಖ್ಯೋಪಾಧ್ಯಾಯನಿ ವಿನಂತಿನಿ ಆಚಾರ್ಯ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸಂಗೀತ ಗುರು ಸರಸ್ವತಿ ಇವರು ಕೊಡಮಾಡಿದ ಸಂಗೀತ ಪುಸ್ತಕವನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು, ಹಾಗೂ ಅವರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments