ಶಿವಪುರ : ದೇಶಭಕ್ತಿ, ಸಂಭ್ರಮ ಹಾಗೂ ಸಾಂಸ್ಕೃತಿಕ ವೈವಿಧ್ಯತೆಯ ಅಪೂರ್ವ ಸಂಗಮಕ್ಕೆ ಸಾಕ್ಷಿಯಾದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿವಪುರ–1ರಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಅತ್ಯಂತ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು.
ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಎಡ್ಡೆ ರಾಘವೇಂದ್ರ ಪೂಜಾರಿ ರಾಷ್ಟ್ರಧ್ವಜಾರೋಹಣ ನೆರವೇರಿಸುವ ಮೂಲಕ ಆರಂಭಗೊಂಡಿತು.
ಸ್ವಾತಂತ್ರ್ಯೋತ್ಸವದ ಮಹತ್ವವನ್ನು ವಿವರಿಸಿ, ವಿದ್ಯಾರ್ಥಿಗಳು ದೇಶದ ಭವಿಷ್ಯದ ಪ್ರಜೆಗಳಾಗಿ ಜವಾಬ್ದಾರಿ, ಶಿಸ್ತು, ದೇಶಪ್ರೇಮ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳುವಂತೆ ಶುಭ ಸಂದೇಶ ವನ್ನು ರಾಘವೇಂದ್ರ ಪೂಜಾರಿ ನೀಡಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಶೋಭಾ ಶೆಟ್ಟಿ ಹುಣಸೆಯಡಿ ಸುರೇಶ್ ಶೆಟ್ಟಿ, ಮೂರ್ಸಾಲು ಮೋಹನದಾಸ ನಾಯಕ್, ಸುಗಂಧಿ ನಾಯಕ್, ಹೆಬ್ರಿ ತಾಲೂಕು ಪಂಚಾಯಿತಿಯ ನಿಕಟಪೂರ್ವ ಅಧ್ಯಕ್ಷ ರಮೇಶ್ ಕುಮಾರ್, ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯೆ ಸುಮಿತ್ರ ನಾಯಕ್, ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಉಪಾಧ್ಯಕ್ಷೆ ಅನುಸೂಯ ಹಿರಿಯಡಕ, ಸದಾನಂದ ನಾಯಕ್, ಗ್ರಾಮ ಪಂಚಾಯಿತಿ ಸದಸ್ಯೆ ಶ್ವೇತಾ ರಾಘವೇಂದ್ರ ಪೂಜಾರಿ, ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಾಲೆಯ ಹಳೆ ವಿದ್ಯಾರ್ಥಿ ರಾಜೇಶ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಿಂದ ದೇಶಭಕ್ತಿ, ನಾಡು-ನುಡಿ ಹಾಗೂ ಸಂಸ್ಕೃತಿಯ ವೈವಿಧ್ಯತೆಯನ್ನು ಪ್ರತಿಬಿಂಬಿಸುವ ಮನಮೋಹಕ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ನೆರೆದಿದ್ದ ಗಣ್ಯರು, ಪೋಷಕರು ಹಾಗೂ ಸಾರ್ವಜನಿಕರಿಂದ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.
ಶಾಲೆಯ ಮುಖ್ಯೋಪಾಧ್ಯಾಯರಾದ ಗುಲಾಬಿ ಅಣ್ಣಪ್ಪ ಕುಲಾಲ್ ಸ್ವಾಗತಿಸಿ, ಸ್ವಾತಂತ್ರ್ಯೋತ್ಸವದ ಶುಭಾಶಯಗಳನ್ನು ಕೋರಿದರು.
ಶಾಲೆಯ ಎಲ್ಲಾ ಅಧ್ಯಾಪಕರು ಕಾರ್ಯಕ್ರಮದ ವಿವಿಧ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಿ, ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಸಂಯೋಜಿಸಿದರು.


