Wednesday, August 19, 2026
Homeಹೆಬ್ರಿಹೆಬ್ರಿಯಲ್ಲಿ ಶ್ರೀ ನಾರಾಯಣ ಗುರು ಜಯಂತಿ ಆಚರಣೆ - ಪೂರ್ವಭಾವಿ ಸಭೆ: ಇದೇ 28 ರಂದು...

ಹೆಬ್ರಿಯಲ್ಲಿ ಶ್ರೀ ನಾರಾಯಣ ಗುರು ಜಯಂತಿ ಆಚರಣೆ – ಪೂರ್ವಭಾವಿ ಸಭೆ: ಇದೇ 28 ರಂದು ಹೆಬ್ರಿಯ ಜೂನಿಯರ್ ಕಾಲೇಜಿನಲ್ಲಿ ಆಚರಣೆ.

ಸಭೆಯಲ್ಲಿ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ ಭಾಗಿ.

ಹೆಬ್ರಿ : ಹೆಬ್ರಿ ತಾಲ್ಲೂಕು ಆಡಳಿತದ ವತಿಯಿಂದ ಇದೇ 28 ರಂದು ಜೂನಿಯರ್ ಕಾಲೇಜಿನಲ್ಲಿ ನಡೆಯಲಿರುವ ತಾಲ್ಲೂಕು ಮಟ್ಟದ ಶ್ರೀ ನಾರಾಯಣ ಗುರು ಜಯಂತಿ ಆಚರಣೆಯ ಪೂರ್ವ ಸಿದ್ಧತಾ ಸಭೆಯು ಬುಧವಾರ ಹೆಬ್ರಿ ತಾಲ್ಲೂಕು ಕಚೇರಿಯಲ್ಲಿ ನಡೆಯಿತು.

ಹೆಬ್ರಿ ತಹಶೀಲ್ಧಾರ್ ರಾಕೇಶ್ ಫ್ರಾನ್ಸಿಸ್ ಬ್ರೀಟ್ಟೋ ಅಧ್ಯಕ್ಷತೆ ವಹಿಸಿ ಸಮಗ್ರ ಮಾಹಿತಿ ನೀಡಿದರು.

ರಾಜ್ಯದ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮುದ್ರಾಡಿ ಮಂಜುನಾಥ ಪೂಜಾರಿ ಭಾಗವಹಿಸಿ ಮಾತನಾಡಿ ಶ್ರೀ ನಾರಾಯಣ ಗುರುಗಳ “ಒಂದೇ ಜಾತಿ, ಒಂದೇ ಮತ, ಒಂದೇ ದೇವರು” ಎಂಬ ಮಹಾನ್ ಸಂದೇಶವನ್ನು ಸಾರುವ ಈ ಪವಿತ್ರ ಜಯಂತಿಯನ್ನು ಅರ್ಥಪೂರ್ಣವಾಗಿ ಹಾಗೂ ಅದ್ಧೂರಿಯಾಗಿ ಆಚರಿಸುವಂತೆ ಸಭೆಯಲ್ಲಿ ಚರ್ಚಿಸಿದರು.
ಶ್ರೀ ನಾರಾಯಣ ಗುರುಗಳ ಆದರ್ಶಗಳು ನಮ್ಮೆಲ್ಲರಿಗೂ ಸದಾ ದಾರಿದೀಪವಾಗಲಿ ಎಂದು ಮಂಜುನಾಥ ಪೂಜಾರಿ ತಿಳಿಸಿದರು.

ಸಭೆಯಲ್ಲಿ ಹೆಬ್ರಿ ಬ್ರಹ್ಮ ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘದ ಅಧ್ಯಕ್ಷ ಬೇಳಂಜೆ ಹರೀಶ್ ಪೂಜಾರಿ, ಸಹಿತ ಹೆಬ್ರಿ ತಾಲ್ಲೂಕಿನ ನಾರಾಯಣ ಗುರು ಸಮಾಜ ಸೇವಾ ಸಂಘದ ಪದಾಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments