Wednesday, September 23, 2026
Homeಹೆಬ್ರಿಲಯನ್ಸ್ ಕ್ಲಬ್ ಹೆಬ್ರಿ ಸಿಟಿ ಅರಣ್ಯ ಇಲಾಖೆಯ ಸಹಕಾರ: ಪರಿಸರ ಸಂರಕ್ಷಣೆ ಮತ್ತು ವ್ರಕ್ಷಾರೋಹಣ ಕಾರ್ಯಕ್ರಮ.

ಲಯನ್ಸ್ ಕ್ಲಬ್ ಹೆಬ್ರಿ ಸಿಟಿ ಅರಣ್ಯ ಇಲಾಖೆಯ ಸಹಕಾರ: ಪರಿಸರ ಸಂರಕ್ಷಣೆ ಮತ್ತು ವ್ರಕ್ಷಾರೋಹಣ ಕಾರ್ಯಕ್ರಮ.

ಹೆಬ್ರಿ : ಲಯನ್ಸ್ ಜಿಲ್ಲೆ317 ಸಿ ಲಯನ್ಸ್ ಕ್ಲಬ್ ಹೆಬ್ರಿ ಸಿಟಿ ಪ್ರಾಯೋಜಕತ್ವದಲ್ಲಿ ಅರಣ್ಯ ಇಲಾಖೆಯ ಸಹಕಾರದೊಂದಿಗೆ ಶುಕ್ರವಾರ ಹೆಬ್ರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಸಂರಕ್ಷಣೆ ಮತ್ತು ವ್ರಕ್ಷಾರೋಹಣ ಕಾರ್ಯಕ್ರಮ ನಡೆಯಿತು.

ಹೆಬ್ರಿ ಸಿಟಿ ಲಯನ್ಸ್ ಕ್ಲಬ್ ಅಧ್ಯಕ್ಷ ಹರೀಶ್ ಶೆಟ್ಟಿ ನಾಡ್ಪಾಲು ಅಧ್ಯಕ್ಷತೆ ವಹಿಸಿದ್ದರು. ಹೆಬ್ರಿ ವಲಯ ಅರಣ್ಯಾಧಿಕಾರಿ ಸಿದ್ದೇಶ್ ಬಿ ಮರಗಳನ್ನು ಬೆಳೆಸುವ ಅಗತ್ಯತೆಯನ್ನು ಶಾಲಾ ಮಕ್ಕಳಿಗೆ ತಿಳಿಸಿದರು.

ಪರಿಸರ ಸಂರಕ್ಷಣೆ ಮತ್ತು ವ್ರಕ್ಷಾರೋಹಣ ವಿಭಾಗದ ಲಯನ್ಸ್ ಜಿಲ್ಲಾ ಸಂಯೋಜಕ ಸೀತಾನದಿ ನಾಗೇಶ್ ನಾಯಕ್ ಪರಿಸರವನ್ನು ಹಸಿರು ಗೊಳಿಸುವಲ್ಲಿ ಸಂಘ ಸಂಸ್ಥೆಗಳ ಪಾತ್ರವನ್ನು ಸ್ಮರಿಸಿದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಉದ್ಯಮಿ ಸತೀಶ್ ಪೈ ಹೆಬ್ರಿ ಮಾತನಾಡಿ ಶಾಲಾ ಮಕ್ಕಳ ಮುಖಾಂತರ ಪರಿಸರವನ್ನು ಹೇಗೆ ಆರೋಗ್ಯಕರವಾಗಿ ಬೆಳೆಸಬೇಕು ಎಂದು ತಿಳಿಸಿದರು.

ಉಪವಲಯ ಅರಣ್ಯ ಅಧಿಕಾರಿ ಜಯರಾಮ್, ಲಯನ್ಸ್ ಕ್ಲಬ್ ಹೆಬ್ರಿ ಸಿಟಿಯ ಕಾರ್ಯದರ್ಶಿ ರಘುರಾಮ್ ಶೆಟ್ಟಿ, ಶಾಲಾ ಮುಖ್ಯೋಪಾಧ್ಯಾಯಿನಿ ಅನಿತಾ ಪಿಂಟೋ, ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಸುರೇಶ್ ಭಂಡಾರಿ ಉಪಸ್ಥಿತರಿದ್ದರು. ಲಯನ್ಸ್ ಮಾಜಿ ಕಾರ್ಯದರ್ಶಿ ರವೀಂದ್ರನಾಥ್ ಶೆಟ್ಟಿ,

ಮಾಜಿ ಕಾರ್ಯದರ್ಶಿ, ನಿಕಟ ಪೂರ್ವ ಅಧ್ಯಕ್ಷೆ ಆಶಾ ಭುಜಂಗ ಶೆಟ್ಟಿ, ಮಾಜಿ ಅಧ್ಯಕ್ಷರಾದ ಚಂದ್ರಶೇಖರ ಶೆಟ್ಟಿ, ಕೃಷ್ಣ ಶೆಟ್ಟಿ, ಮಾಜಿ ಅಧ್ಯಕ್ಷರು, ಲಯನ್ಸ್ ಮಾಜಿ ಪ್ರಾಂತೀಯ ಅಧ್ಯಕ್ಷ ಹರೀಶ್ ಪೂಜಾರಿ ಬೇಳಂಜೆ , ಶಾಲೆಯ ಶಿಕ್ಷಕ ವೃಂದ ಮತ್ತು ಶಾಲಾ ಮಕ್ಕಳು ಉಪಸ್ಥಿತರಿದ್ದರು.

ಶಾಲಾ ಮಕ್ಕಳಿಗೆ ವಿವಿಧ ತಳಿಯ 100 ಸಸಿಗಳನ್ನು ವಿತರಿಸಲಾಯಿತು. ಶಿಕ್ಷಕ ಶರತ್ ಶೆಟ್ಟಿ ನಿರೂಪಿಸಿ ವಂದಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!