Wednesday, September 23, 2026
Homeಹೆಬ್ರಿಹೆಬ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆನ್ಸಿ ಆಫ್ ಇಂಡಿಯಾ ಉಡುಪಿ...

ಹೆಬ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆನ್ಸಿ ಆಫ್ ಇಂಡಿಯಾ ಉಡುಪಿ ಶಾಖೆ ವತಿಯಿಂದ ಸಿಎ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ.

ಹೆಬ್ರಿ : ಹೆಬ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆನ್ಸಿ ಆಫ್ ಇಂಡಿಯಾ, ಉಡುಪಿ ಶಾಖೆಯ ವತಿಯಿಂದ ಬಿಕಾಂ ವಿದ್ಯಾರ್ಥಿಗಳಿಗಾಗಿ ಸಿಎ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮವು ನಡೆಯಿತು.

ಕಾಲೇಜಿನ ವಾಣಿಜ್ಯ ವಿಭಾಗದ ಸಂಯೋಜನೆಯೊಂದಿಗೆ ನಡೆದ ಮಾಹಿತಿ ಕಾರ್ಯಕ್ರಮದಲ್ಲಿ ಉಡುಪಿಯ ಚಾರ್ಟೆಡ್ ಅಕೌಂಟೆಂಟ್ ಅಪೇಕ್ಷ್ ಶೆಟ್ಟಿ ಅವರು ಸಿಎ ವಿದ್ಯಾಭ್ಯಾಸ, ಅದರ ವಿವಿಧ ಹಂತಗಳು, ಹಾಗೂ ಉದ್ಯೋಗಾವಕಾಶಗಳ ಮಾಹಿತಿಯನ್ನು ನೀಡಿದರು.

ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಂಶುಪಾಲ ಡಾ. ವಿದ್ಯಾದರ ಹೆಗ್ಡೆ ಎಸ್ ಅವರು ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಕ್ರಮವು ಸಿಎ ವೃತ್ತಿಯನ್ನು ಆಯ್ದುಕೊಳ್ಳಲು ಪ್ರೇರಣೆಯಾಗಲಿ ಎಂದು ಆಶಯ ವ್ಯಕ್ತಪಡಿಸಿದರು.

ಐಕ್ಯೂ ಎಸಿ ಸಂಚಾಲಕ ಡಾ. ಗಣೇಶ್ ಎಸ್ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಗಳನ್ನು ಸನ್ಮಾನಿಸಲಾಯಿತು.

ಉಡುಪಿಯ ಚಾರ್ಟೆಡ್ ಅಕೌಂಟೆಂಟ್ ಸೋನಿತ್ ಶೆಟ್ಟಿ ಸ್ವಾಗತಿಸಿ ನಿರೂಪಿಸಿದರು. ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಸುಷ್ಮಾ ರಾವ್ ಕೆ ವಂದಿಸಿದರು. ಪ್ರಾಧ್ಯಾಪಕರಾದ ಡಾ. ಮೇವಿ ವಿರಾಂಡ, ಡಾ. ಮನೋಜ್ ಕುಮಾರ್, ಪ್ರವೀಣ್ ಶೆಟ್ಟಿ, ವಿಮಲ, ಡಾ. ದೊಡ್ಡಮನಿ ಸಹಕರಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!