ಚಿತ್ರಕಲಾ ಸ್ಪರ್ಧೆಯನ್ನು ಉದ್ಘಾಟಿಸಿದ ಮುದ್ರಾಡಿ ಮಂಜುನಾಥ ಪೂಜಾರಿ.
ಮಕ್ಕಳಲ್ಲಿ ಸೃಜನಶೀಲತೆ ಹಾಗೂ ನಾರಾಯಣ ಗುರುಗಳ ತತ್ವ ಆದರ್ಶಗಳ ಅರಿವು ಮೂಡಿಸುವ ಅರ್ಥಪೂರ್ಣ ಕಾರ್ಯಕ್ರಮ. – ಮುದ್ರಾಡಿ ಮಂಜುನಾಥ ಪೂಜಾರಿ.
ಅಖಿಲ ಭಾರತ ಬಿಲ್ಲವರ ಯೂನಿಯನ್ (ರಿ.) ಹಾಗೂ ನಾರಾಯಣಗುರು ವಿದ್ಯಾ ಸಂಸ್ಥೆಗಳು ಕುದ್ರೋಳಿ ಮಂಗಳೂರು ಇದರ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಪ್ರಯುಕ್ತ ಆಯೋಜಿಸಲಾದ “ಗುರು ಚಿತ್ತಾರ–2026” ಚಿತ್ರಕಲಾ ಸ್ಪರ್ಧೆಯ ಉದ್ಘಾಟನೆ ನಡೆಯಿತು.
ಕುದ್ರೋಳಿಯ ದಾಮೋದರ ಆರ್. ಸುವರ್ಣ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ರಾಜ್ಯದ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ರಾದ ಮುದ್ರಾಡಿ ಮಂಜುನಾಥ ಪೂಜಾರಿ ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು.
ಮಕ್ಕಳಲ್ಲಿ ಸೃಜನಶೀಲತೆ ಹಾಗೂ ನಾರಾಯಣ ಗುರುಗಳ ತತ್ವ ಆದರ್ಶಗಳ ಅರಿವು ಮೂಡಿಸುವ ಅರ್ಥಪೂರ್ಣ ಕಾರ್ಯಕ್ರಮ ನಡೆಯಿತು ಎಂದು ಮುದ್ರಾಡಿ ಮಂಜುನಾಥ ಪೂಜಾರಿ ಮೆಚ್ಚುಗೆ ವ್ಯಕ್ತಪಡಿಸಿದರು.
ಮಂಗಳೂರು ವಿದ್ಯುತ್‌ಚ್ಛಕ್ತಿ ನಿಗಮದ ಅಧ್ಯಕ್ಷರಾದ ಹರೀಶ್ ಕುಮಾರ್, ಸಭಾಧ್ಯಕ್ಷ ನವೀನ ಚಂದ್ರ ಡಿ. ಸುವರ್ಣ ಉಪಸ್ಥಿತರಿದ್ದರು.





