Wednesday, September 23, 2026
Homeಹೆಬ್ರಿಸಮಾಜದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ದೇಶಕ್ಕೆ ಕೊಡುಗೆ ನೀಡುವವರಾಗಿ : ಡಾ. ಅಬ್ದುಲ್ ಖಾದರ್

ಸಮಾಜದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ದೇಶಕ್ಕೆ ಕೊಡುಗೆ ನೀಡುವವರಾಗಿ : ಡಾ. ಅಬ್ದುಲ್ ಖಾದರ್

ವಿದ್ಯಾರ್ಥಿಗಳು ಕೇವಲ ಉತ್ತಮ ಅಂಕ ಗಳಿಸುವುದನ್ನಷ್ಟೇ ಗುರಿಯಾಗಿಸಿಕೊಳ್ಳದೆ, ಶಿಕ್ಷಣ, ವಿಜ್ಞಾನ, ತಂತ್ರಜ್ಞಾನ, ವೈದ್ಯಕೀಯ, ಆಡಳಿತ, ಉದ್ಯಮ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ದೇಶದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡುವ ನಾಗರಿಕರಾಗಿ ರೂಪುಗೊಳ್ಳಬೇಕು ಎಂದು ಬೀದರ್ ಜಿಲ್ಲೆಯ ಶಾಹೀನ್ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಡಾ. ಅಬ್ದುಲ್ ಖಾದರ್ ಹೇಳಿದರು. ಅವರು ನಗರದ ಮಣಿಪಾಲ್‌ ಇನ್ ಹೋಟೆಲ್ ರಂಜಿತಾ ಪ್ಯಾಲೇಸ್‌ನಲ್ಲಿ ನಮ್ಮ ನಾಡ ಒಕ್ಕೂಟ (ರಿ.), ಉಡುಪಿ ಜಿಲ್ಲಾ ಘಟಕ ಆಯೋಜಿಸಿದ್ದ ‘ವೃತ್ತಿ ಮಾರ್ಗದರ್ಶನ ಹಾಗೂ ಸಾಧಕರ ಸನ್ಮಾನ ಸಮಾರಂಭ–2026’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದರು.

ಇನ್ನೋರ್ವ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್, ವಿದ್ಯಾರ್ಥಿಗಳಿಗೆ ಸರಿಯಾದ ಸಮಯದಲ್ಲಿ ವೃತ್ತಿ ಮಾರ್ಗದರ್ಶನ ದೊರೆತರೆ ಅವರ ಭವಿಷ್ಯ ಉಜ್ವಲವಾಗುತ್ತದೆ ಎಂದು ಹೇಳಿದರು. ದಾರುಲ್ ಹುದಾ ಚಾರಿಟೇಬಲ್ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಡಾ. ನಕ್ವಾ ಪರ್ವೇಜ್ ಅಹ್ಮದ್ ಮದನಿ ಮಾತನಾಡಿ, ಜೀವನದಲ್ಲಿ ಯಶಸ್ಸು ಸಾಧಿಸಲು ಗುರಿ, ಪರಿಶ್ರಮ, ಶಿಸ್ತು ಮತ್ತು ಆತ್ಮವಿಶ್ವಾಸ ಅತ್ಯಗತ್ಯ. ಎಂದರು.

ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಮುಹಮ್ಮದ್ ಮೌಲಾ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ನಮ್ಮ ನಾಡ ಒಕ್ಕೂಟ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ನಕ್ವಾ ಯಾಹ್ಯಾ ಮಲ್ಪೆ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸುಲ್ತಾನ್ ಡೈಮಂಡ್ಸ್ ಅಂಡ್ ಗೋಲ್ಡ್‌ನ ವ್ಯವಸ್ಥಾಪಕ ನಿರ್ದೇಶಕ ಡಾ. ಟಿ.ಎಂ. ಅಬ್ದುಲ್ ರಹೂಫ್, ನಮ್ಮ ನಾಡ ಒಕ್ಕೂಟ ಕೇಂದ್ರ ಸಮಿತಿಯ ಅಧ್ಯಕ್ಷ ಡಾ. ರಿಜ್ವಾನ್ ಅಹ್ಮದ್, ಉದ್ಯಮಿ ಸಾಧಿಕ್‌ ಗುಡ್ಮಿ ಸಭೆಯನ್ನುದ್ದೇಶಿಸಿ ಮಾತನಾಡಿದರು.

ವೇದಿಕೆಯಲ್ಲಿ ನಮ್ಮ ನಾಡ ಒಕ್ಕೂಟದ ಟ್ರಸ್ಟಿಗಳಾದ ಮುಶ್ತಾಕ್‌ ಅಹಮದ್‌ ಬೆಳ್ವೆ, ಪೀರು ಸಾಹೇಬ್‌, ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಫಾಝಿಲ್ ಅಹಮ್ಮದ್, ಖಜಾಂಚಿ ಝಹೀರ್ ನಖುದಾ ಗಂಗೊಳ್ಳಿ, ಕಾರ್ಯಕ್ರಮ ಸಂಚಾಲಕ ಟಿ.ಎಂ. ಜಫ್ರುಲ್ಲಾ ಹೂಡೆ, ಉಡುಪಿ ತಾಲೂಕು ಹಾಗೂ ಕಮ್ಯೂನಿಟಿ ಸೆಂಟರ್ ಅಧ್ಯಕ್ಷ ಇಬಾದ್ ಉಸ್ಮಾನ್ ಸಾಹೇಬ್, ಬೈಂದೂರು ತಾಲೂಕು ಅಧ್ಯಕ್ಷ ಸೈಯದ್ ಎಂ. ಅಜ್ಮಲ್, ಕುಂದಾಪುರ ತಾಲೂಕು ಅಧ್ಯಕ್ಷ ಜಮಾಲ್ ಎ., ಬ್ರಹ್ಮಾವರ ತಾಲೂಕು ಅಧ್ಯಕ್ಷ ಸಕೀರ್ ಎಂ., ಹೆಬ್ರಿ ತಾಲೂಕು ಅಧ್ಯಕ್ಷ ಅನ್ಸಾರ್, ಕಾರ್ಕಳ ತಾಲೂಕು ಅಧ್ಯಕ್ಷ ಮುಹಮ್ಮದ್ ಮುಸ್ತಫಾ ಹಾಗೂ ಕಾಪು ತಾಲೂಕು ಅಧ್ಯಕ್ಷ ಅಬ್ದುಲ್ ಹಮೀದ್ ಯೂಸುಫ್, ಉಪಸ್ಥಿತರಿದ್ದರು.

ಮೌಲಾನ ಝಮೀರ್ ಅಹಮದ್ ರಶೀದ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಅಡ್ವೊಕೇಟ್ ಮಹಮ್ಮದ್ ಸುಹಾನ್ ಸಾಸ್ತಾನ್ ಕಾರ್ಯಕ್ರಮ ನಿರೂಪಿಸಿದರು. ಅಬೂ ಮಹಮ್ಮದ್‌ ಧನ್ಯವಾದವಿತ್ತರು.ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಣ ತಜ್ಞರು ಹಾಗೂ ಸಮಾಜದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದು, ವೃತ್ತಿ ಮಾರ್ಗದರ್ಶನದ ಜೊತೆಗೆ ಸಾಧಕರಿಗೆ ಸನ್ಮಾನ ಸಲ್ಲಿಸಿದ ಈ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!