ನಿಗಮದ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ ಉಪಸ್ಥಿತಿ.
ಬೆಂಗಳೂರು : ಕನ್ನಡ ಸಂಸ್ಕೃತಿ ಇಲಾಖೆಯ ವತಿಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ರಾಜ್ಯ ಮಟ್ಟದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಮಹೋತ್ಸವ ಇದೇ 28ರಂದು ನಡೆಯಲಿದೆ.
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಹೋತ್ಸವಕ್ಕೆ ಚಾಲನೆ ನೀಡುವರು. ಆರ್ಯ ಈಡಿಗ ಮಹಾಸಂಸ್ಥಾನ ಸೋಲೂರಿನ ಶ್ರೀ ವಿಖ್ಯಾತನಂದ ಸ್ವಾಮೀಜಿ ಸೇರಿ ಸಮುದಾಯ ವಿವಿಧ ಧರ್ಮಗುರುಗಳು ದಿವ್ಯ ಸಾನಿಧ್ಯ ವಹಿಸುವರು.
ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ, ಸಚಿವರು, ಶಾಸಕರು ಸೇರಿದಂತೆ ಗಣ್ಯರು ಭಾಗವಹಿಸುವವರು.







