ನೇಪಾಳ ಪ್ರವಾಹ ಸಂಕಷ್ಟಕ್ಕೆ ಸಿಕ್ಕಿರುವವರ ರಕ್ಷಣೆ ಹಾಗೂ ಅವರ ಊರಿಗೆ ವಾಪಸ್ಸು ಕಳುಹಿಸುವ ಕಾರ್ಯಾಚರಣೆ ಬಗ್ಗೆ ಸಿಎಂ ಡಿ ಕೆ ಶಿವಕುಮಾರ್ ಅವರು ದೆಹಲಿಯ ಕರ್ನಾಟಕ ಭವನದ ರೆಸಿಡೆಂಟ್ ಕಮಿಷನರ್ ಸಮೀರ್ ಶುಕ್ಲಾ ಅವರಿಂದ ಭಾನುವಾರ ರಾತ್ರಿ ಮಾಹಿತಿ ಪಡೆದರು.
ನೇಪಾಳದಲ್ಲಿ ಸಂಭವಿಸಿರುವ ಹಠಾತ್ ಪ್ರವಾಹ ಮತ್ತು ಭೂಕುಸಿತದ ಹಿನ್ನೆಲೆಯಲ್ಲಿ ಅಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣಾ ಕಾರ್ಯಾಚರಣೆಯ ಪ್ರಗತಿ ಕುರಿತು ನವದೆಹಲಿಯ ಕರ್ನಾಟಕ ಭವನದ ನಿವಾಸಿ ಆಯುಕ್ತರಿಂದ ಸಮಗ್ರ ಮಾಹಿತಿ ಪಡೆಯಲಾಯಿತು.
ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರ ಸುರಕ್ಷಿತ ವಾಪಸಾತಿಗೆ ನಮ್ಮ ಸರ್ಕಾರ ಸಕಲ ಕ್ರಮ ಕೈಗೊಂಡಿದೆ. ಈಗಾಗಲೇ 54 ಮಂದಿ ತಾಯ್ನಾಡಿಗೆ ಸುರಕ್ಷಿತವಾಗಿ ಮರಳಿದ್ದಾರೆ. ಸಂತ್ರಸ್ತರ ಕುಟುಂಬಸ್ಥರು ಯಾವುದೇ ಆತಂಕ ಪಡಬೇಕಿಲ್ಲ, ಸರ್ಕಾರ ನಿಮ್ಮೊಂದಿಗಿದೆ ಎಂದು ಸಿ.ಎಂ. ಡಿ.ಕೆ.ಶಿವಕುಮಾರ್ ಅಭಯ ನೀಡಿದರು.



