ಹೆಬ್ರಿ : ಶಾಲಾ ಶಿಕ್ಷಣ ಇಲಾಖೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಕಾರ್ಕಳ, ಮತ್ತು ಅಮೃತಭಾರತಿ ವಿದ್ಯಾಲಯ ಹೆಬ್ರಿ ಸಹಯೋಗದಲ್ಲಿ ನಡೆದ ತಾಲೂಕು ಮಟ್ಟದ 17ರ ವಯೋಮಿತಿಯ ಬಾಲಕರ ವಾಲಿಬಾಲ್ ಪಂದ್ಯಾವಳಿಯಲ್ಲಿ ಹೆಬ್ರಿ ತಾಲೂಕನ್ನು ಪ್ರತಿನಿಧಿಸಿದ ಹೆಬ್ರಿ ಪಿ ಆರ್ ಎನ್ ಅಮೃತ ಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಚಾಂಪಿಯನ್ ಆಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳನ್ನು ಮತ್ತು ತರಬೇತಿ ನೀಡಿದ ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ನಿಶಾನ್ ಶೆಟ್ಟಿ ಇವರನ್ನು ಸಂಸ್ಥೆಯ ಮುಖ್ಯಸ್ಥೆ ಅಪರ್ಣಾ ಆಚಾರ್ ಅಭಿನಂದಿಸಿದ್ದಾರೆ.



