ಹೆಬ್ರಿ : ಹೆಬ್ರಿಯ ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಿಸಲಾಯಿತು. ಹೆಬ್ರಿ ಇಸ್ಕಾನ್ ಸಂಸ್ಥೆಯ ಭರತ್ ಚಂದ್ರ ದಾಸ್ ಉದ್ಘಾಟಿಸಿ, ಕೃಷ್ಣಜನ್ಮಾಷ್ಟಮಿಯನ್ನು ಆಚರಿಸುತ್ತಿದ್ದೀರಿ, ಬಹಳ ಸಂತೋಷ. ಕೃಷ್ಣ ಜನ್ಮಗಳನ್ನು ಮೀರಿದವರು. ಕೃಷ್ಣನ ತತ್ವಗಳನ್ನು ಅರಿತುಕೊಳ್ಳಬೇಕು. ನಮ್ಮನ್ನು ಸಂಪೂರ್ಣವಾಗಿ ಕೃಷ್ಣನಲ್ಲಿ ಅರ್ಪಿಸಿಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಎಚ್. ನಾಗರಾಜ ಶೆಟ್ಟಿ ಮಾತನಾಡಿ, ಮಕ್ಕಳಿಗೆ ಒಳ್ಳೆಯದಾಗಲಿ ಎಲ್ಲಾ ಮಕ್ಕಳು ಪಾಲ್ಗೊಂಡಿದ್ದೀರಿ ತುಂಬಾ ಸಂತೋಷ ದೇವರು ನಿಮ್ಮ ಆಸೆಗಳನ್ನು ಈಡೇರಿಸಲಿ ಎಲ್ಲರಿಗೂ ಶುಭವಾಗಲಿ ಎಂದು ಹರಸಿದರು.
ಕಾರ್ಯಕ್ರಮದಲ್ಲಿ ಕೃಷ್ಣ, ರಾಧೆ ವೇಷಧಾರಿ ಪುಟಾಣಿಗಳ ಮೆರವಣಿಗೆ ನಡೆಯಿತು. ವಿದ್ಯಾರ್ಥಿಗಳಿಂದ ಕೃಷ್ಣನ ಲೀಲೆಗಳನ್ನು ಬಣ್ಣಿಸುವ ವಿವಿಧ ನೃತ್ಯಗಳು, ಭಜನೆ, ಹುಲಿಕುಣಿತ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ, ಮೊಸರು ಕುಡಿಕೆ, ಕೊಳಲು ವಾದನ, ಕೀಬೋರ್ಡ್, ಸ್ಯಾಕ್ಸೋಫೋನ್ ಇತ್ಯಾದಿ ವೈವಿಧ್ಯಮಯ ಕಾರ್ಯಕ್ರಮ ನಡೆಯಿತು.
ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸಪ್ನಾ ಎನ್ ಶೆಟ್ಟಿ, ಎಸ್.ಆರ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರಶಾಂತ್, ಎಸ್.ಆರ್. ಪಬ್ಲಿಕ್ ಸ್ಕೂಲ್ ಪ್ರಾಂಶುಪಾಲೆ ಭಗವತಿ, ಉಪಪ್ರಾಂಶುಪಾಲ ದೀಪಕ್ ಎನ್, ಎಸ್.ಆರ್.ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಗೋಪಾಲ ಆಚಾರ್ಯ, ಸಂಸ್ಥೆಯ ಶಿಕ್ಷಕರು, ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಶಿಕ್ಷಕಿ ಹೇಮಾ ನಿರೂಪಿಸಿದರು.



