Wednesday, September 23, 2026
Homeಮುದ್ರಾಡಿ ಗ್ರಾಮ ಪಂಚಾಯತ್‌ಮುದ್ರಾಡಿ ನೆಲ್ಲಿಕಟ್ಟೆ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ.

ಮುದ್ರಾಡಿ ನೆಲ್ಲಿಕಟ್ಟೆ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ.

ಮುದ್ರಾಡಿ : ಮುದ್ರಾಡಿ ನೆಲ್ಲಿಕಟ್ಟೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಶಿಕ್ಷಕರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಪೋಷಕರು ಮತ್ತು ಹಳೆ ವಿದ್ಯಾರ್ಥಿಗಳು ಶಾಲೆಗೆ ಆಗಮಿಸಿ, ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನಗಳನ್ನು ವಿತರಿಸಿದರು.

ಶಿಕ್ಷಕರಿಗೆ ಊಟದ ವ್ಯವಸ್ಥೆಯನ್ನು ಮಾಡಿದರು. ಪೋಷಕರು ಮತ್ತು ಹಳೆ ವಿದ್ಯಾರ್ಥಿಗಳು ಶಿಕ್ಷಕರ ಸಂಭ್ರಮದ ದಿನಾಚರಣೆಯನ್ನು ಈ ರೀತಿ ಆಚರಿಸುವುದರ ಮೂಲಕ ಸರಕಾರಿ ಶಾಲೆಯನ್ನು ಉಳಿಸುವಲ್ಲಿ ಹಾಗೂ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದಂತಾಗುತ್ತದೆ ಎಂದು ಮುಖ್ಯ ಶಿಕ್ಷಕ ರವೀಂದ್ರ ಹೆಗ್ಡೆ ಹೇಳಿದರು.

ಸಹ ಶಿಕ್ಷಕಿ ಶೋಭಾ ಕುಮಾರಿ, ಗೌರವ ಶಿಕ್ಷಕಿಯರಾದ ಅಮೃತ, ನಂದಿನಿ, ಅಂಗನವಾಡಿ ಶಿಕ್ಷಕಿ ವಿದ್ಯಾ ಹಾಗೂ ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಸುನಿತಾ ಅವರು ಭಾಗವಹಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!