ಕರ್ಜೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್( ರಿ) ಹೆಬ್ರಿ ತಾಲ್ಲೂಕು ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಪರಮಪೂಜ್ಯ ಡಾ ಡಿ ವೀರೇಂದ್ರ ಹೆಗ್ಗಡೆ ಹಾಗೂ ಮಾತೃಶ್ರೀ ಡಾ ಹೇಮಾವತಿ ವಿ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಕರ್ಜೆ ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳೆಯರಿಗೆ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಕುತ್ಪಾಡಿ ಉಡುಪಿ ಹಾಗೂ ಸರ್ಕಾರಿ ಆಸ್ಪತ್ರೆ ಕರ್ಜೆ ಇಲ್ಲಿಯ ಜಂಟಿ ಆಶ್ರಯದಲ್ಲಿ ಆರೋಗ್ಯ ತಪಾಸಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಹೆಣ್ಣು ಮಕ್ಕಳ ಗರ್ಭಾಶಯದ ಅಸಹಜ ರಕ್ತಸ್ರಾವ, ಉಚಿತ ಆಯುರ್ವೇದ ಸಮಾಲೋಚನೆ ಮತ್ತು ಚಿಕಿತ್ಸಾ ಶಿಬಿರ ನಡೆಯಿತು.
ಕಾರ್ಯಕ್ರಮವನ್ನು ಹೆಬ್ರಿ ತಾಲ್ಲೂಕಿನ ಯೋಜನಾಧಿಕಾರಿ ರೇಷ್ಮಾ ಉದ್ಘಾಟಿಸಿ ಪ್ರತಿಯೊಬ್ಬರ ಮನೆಯಲ್ಲಿ ಮಹಿಳೆಯ ಆರೋಗ್ಯ ಚೆನ್ನಾಗಿದ್ದರೆ ಇಡೀ ಕುಟುಂಬದ ಆರೋಗ್ಯ ಚೆನ್ನಾಗಿರುತ್ತದೆ. ಎಲ್ಲರೂ ತಮ್ಮ ಆರೋಗ್ಯವನ್ನು ಆಗಾಗ ತಪಾಸಣೆ ಮಾಡಿಸಿಕೊಳ್ಳುವುದರಿಂದ ತೊಂದರೆಗಳಿಂದ ತಪ್ಪಿಸಿಕೊಳ್ಳಬಹುದು ಎಂದು ಮಾಹಿತಿ ಮಾರ್ಗದರ್ಶನ ನೀಡಿದರು.
ಎಸ್ ಡಿಎಂ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಪವಿತ್ರ ಮಾತನಾಡಿ ಇತ್ತೀಚೆಗೆ ಹೆಣ್ಣುಮಕ್ಕಳಲ್ಲಿ ಆಗುವ ಮುಟ್ಟಿನ ಸಮಸ್ಯೆಗಳ ಬಗ್ಗೆ ಹಾಗೂ ಅವರ ಆಹಾರ ಶೈಲಿಗಳ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ವೈದ್ಯಾಧಿಕಾರಿ ಡಾ. ನಿಖಿತ, ಕರ್ಜೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಸತೀಶ್, ಒಕ್ಕೂಟದ ಅಧ್ಯಕ್ಷ ವಸಂತ, ಪ್ರದೀಪ್ , ಮೇಲ್ವಿಚಾರಕ ಸುಮನ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಬಿ ಪಿ ಶುಗರ್, ಸ್ತ್ರೀರೋಗ ಸ್ಕ್ರೀನಿಂಗ್ ಕ್ಯಾಂಪ್ ನಡೆಸಲಾಯಿತು.
ಜ್ಞಾನವಿಕಾಸ ಸಮನ್ವಯಾಧಿಕಾರಿ ಚಂದ್ರಾವತಿ ನಿರೂಪಿಸಿದರು ಸೇವಾ ಪ್ರತಿನಿಧಿ ಜ್ಯೋತಿ ಸ್ವಾಗತಿಸಿ ವಂದಿಸಿದರು.




