ಹೆಬ್ರಿ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ವತಿಯಿಂದ ಹೆಬ್ರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಹೆಬ್ರಿ ತಾಲೂಕು ಮಟ್ಟದ ಫುಟ್‌ಬಾಲ್ ಪಂದ್ಯಾಕೂಟದಲ್ಲಿ ಪಿ.ಆರ್.ಎನ್. ಅಮೃತ ಭಾರತಿ ಪದವಿ ಪೂರ್ವ ಕಾಲೇಜು ಹೆಬ್ರಿಯ ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ.
ಬಾಲಕರ ವಿಭಾಗದಲ್ಲಿ ಪ್ರತೀಕ್, ಪ್ರಖ್ಯಾತ್, ನಂದೀಶ್, ಸೃಜನ್ ಆರಾಧ್ಯ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳನ್ನು ತರಬೇತಿಗೊಳಿಸಿದ ದೈಹಿಕ ಶಿಕ್ಷಕಿ ಪಾವನ ಶೆಟ್ಟಿ ಮತ್ತು ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಶಿಕ್ಷಕರು ಅಭಿನಂದನೆ ಸಲ್ಲಿಸಿದ್ದಾರೆ.



