Thursday, September 24, 2026
Homeಹೆಬ್ರಿಬ್ರಹ್ಮಾವರದಲ್ಲಿ ವಿಶ್ವ ಭೌತಚಿಕಿತ್ಸಾ ದಿನ 2026 – ಜಾಗೃತಿ ಕಾರ್ಯಕ್ರಮ.

ಬ್ರಹ್ಮಾವರದಲ್ಲಿ ವಿಶ್ವ ಭೌತಚಿಕಿತ್ಸಾ ದಿನ 2026 – ಜಾಗೃತಿ ಕಾರ್ಯಕ್ರಮ.

ಸಾರ್ವಜನಿಕ ಆರೋಗ್ಯವನ್ನು ಕಾಪಾಡುವಲ್ಲಿ ಭೌತಚಿಕಿತ್ಸಕರ ಪಾತ್ರ ಶ್ಲಾಘನೀಯ : ಡಾ. ಲತಾ ನಾಯಕ್.

ಬ್ರಹ್ಮಾವರ : ಪಾರ್ಶ್ವವಾಯು ತಡೆಗಟ್ಟುವಿಕೆ, ಆರಂಭಿಕ ರೋಗನಿರ್ಣಯ ಮತ್ತು ಸಕಾಲಿಕ ಚಿಕಿತ್ಸೆಯ ಮಹತ್ವದ ಕುರಿತು ತಿಳಿಸಿದರು. ಸಾರ್ವಜನಿಕ ಆರೋಗ್ಯವನ್ನು ಕಾಪಾಡುವಲ್ಲಿ ಭೌತಚಿಕಿತ್ಸಕರ ಪಾತ್ರ ಶ್ಲಾಘನೀಯ ಎಂದು ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿಯಾಗಿರುವ ಕಬಿ ಕಾರ್ಯಕ್ರಮದ ನೋಡೆಲ್ ಅಧಿಕಾರಿ ಡಾ. ಲತಾ ನಾಯಕ್ ಮೆಚ್ಚುಗೆ ವ್ಯಕ್ತಪಡಿಸಿದರು.

ಅವರು ರುಡ್ ಸೆಟ್ ಸಂಸ್ಥೆ ಬ್ರಹ್ಮಾವರ ದಲ್ಲಿ ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಉಡುಪಿ, ಜಿಲ್ಲಾ ಆಸ್ಪತ್ರೆ ಉಡುಪಿ, ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ (ಕಭೀ), ಇವರ ಆಶ್ರಯದಲ್ಲಿ ಸೆಪ್ಟೆಂಬರ್ 08 ರಿಂದ 15 ರ ತನಕ ನಡೆಯುವ
ವಿಶ್ವ ಭೌತಚಿಕಿತ್ಸಾ ದಿನಾಚರಣೆಯನ್ನು ಉದ್ಘಾಟಿಸಿ
ಮಾತನಾಡಿದರು.

ವಿಶ್ವ ಭೌತಚಿಕಿತ್ಸಾ ದಿನದ ಅಂಗವಾಗಿ ಉಡುಪಿ ಜಿಲ್ಲೆಯ ಬ್ರಹ್ಮಾವರದ RUDSET ಸಂಸ್ಥೆಯಲ್ಲಿ ಸಾರ್ವಜನಿಕ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಕಾರ್ಯಕ್ರಮವನ್ನು ನಂತರ ಕಭೀ ಕಾರ್ಯಕ್ರಮ ಹಾಗೂ ಪಾರ್ಶ್ವವಾಯು (ಸ್ಟ್ರೋಕ್) ತಡೆಗಟ್ಟುವಿಕೆ ಮತ್ತು ಹೃದಯರಕ್ತನಾಳದ ಆರೋಗ್ಯದ ಕುರಿತು ಸಾರ್ವಜನಿಕ ಜಾಗೃತಿ ಅಧಿವೇಶನ ನಡೆಯಿತು.

ಈ ಅಧಿವೇಶನದಲ್ಲಿ ಪಾರ್ಶ್ವವಾಯು ಮತ್ತು ಹೃದಯ ಸಂಬಂಧಿ ಕಾಯಿಲೆಗಳ ತಡೆಗಟ್ಟುವಿಕೆ, ನಿರ್ವಹಣೆ ಮತ್ತು ಪುನರ್ವಸತಿಯಲ್ಲಿ ಭೌತಚಿಕಿತ್ಸಕರ ಮಹತ್ವದ ಪಾತ್ರದ ಬಗ್ಗೆ ಮಾಹಿತಿ ನೀಡಲಾಯಿತು.

ಜಿಲ್ಲಾಸ್ಪತ್ರೆ ಯಲ್ಲಿನ ಬ್ರೈನ್ ಹೆಲ್ತ್ ಕ್ಲಿನಿಕ್ ನ ಸಿಬ್ಬಂದಿ ಹಾಗೂ ದೊರಕುವ ಸೌಲಭ್ಯಗಳ ಮಾಹಿತಿಯನ್ನು ಜಿಲ್ಲಾ ಸಂಯೋಜಕಿ ಅರ್ಪಿತಾ ಬ್ರಹ್ಮಾವರ, ಭೌತಚಿಕಿತ್ಸಕರಾದ ಯಶಸ್ವಿನಿ. ವಿ ಹಾಗೂ ಹೇಮಾ ಪಿ. ತಿಳಿಸಿದರು. ಜಾಗೃತಿ ಮೂಡಿಸಲು ಪಾರ್ಶ್ವವಾಯು ತಡೆಗಟ್ಟುವಿಕೆ ಮತ್ತು ಭೌತಚಿಕಿತ್ಸೆಗೆ ಸಂಬಂಧಿಸಿದ ಮಾಹಿತಿಯುಕ್ತ ಕರಪತ್ರಗಳನ್ನು ಸಾರ್ವಜನಿಕರಿಗೆ ವಿತರಿಸಲಾಯಿತು.

ರುಡ್ ಸೆಟ್ ಸಂಸ್ಥೆ ಯ ಉಪನ್ಯಾಸಕ ಸಂತೋಷ ನಿರೂಪಿಸಿದರು. ಅರ್ಪಿತಾ ಬ್ರಹ್ಮಾವರ ಸ್ವಾಗತಿಸಿ ವಂದಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!