ಉಡುಪಿ : ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿ ಸಂಘಗಳ ಒಕ್ಕೂಟದ ನಿರ್ದೇಶಕರಾಗಿ ಕಬ್ಬಿನಾಲೆ ಚಂದ್ರಶೇಖರ ಬಾಯರಿ ಅವರನ್ನು ಆಯ್ಕೆ ಮಾಡಲಾಗಿದೆ.
ವರಂಗ ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕರಾಗಿ, ಅಧ್ಯಕ್ಷರಾಗಿ, ಮುದ್ರಾಡಿ ಗ್ರಾಮ ಪಂಚಾಯತಿ ಸಧಸ್ಯರಾಗಿ, ಅಧ್ಯಕ್ಷರಾಗಿ ಸೇವೆಯನ್ನು ಸಲ್ಲಿಸಿದ್ದಾರೆ.
ಸಾಮಾಜಿಕ, ಸಹಕಾರ, ರಾಜಕೀಯ ಮತ್ತು ದಾರ್ಮಿಕ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಪ್ರಸ್ತುತ ಶ್ರೀ ಅನಂತ ಪದ್ಮನಾಭ ಸೌಹಾರ್ದ ಕ್ರೆಡಿಟ್ ಕೋ ಅಪರೇಟಿವ್ ಲಿ. ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.



