ಸ್ಥಳಕ್ಕೆ ಅಧಿಕಾರಿಗಳ ಭೇಟಿ : ಭರವಸೆ.
ಹೆಬ್ರಿ : ಹೆಬ್ರಿ ತಾಲ್ಲೂಕಿನ ಹೆಬ್ರಿ ಗ್ರಾಮದ ಸಾಂತೊಳ್ಳಿ, ಮಣಿಗುಂಡಿ, ಕಾರ್ಕಳ ಜಡ್ಡು, ನಿವಾಸಿಗಳ ರಸ್ತೆ, ಸೇತುವೆ ಸಹಿತ ಮೂಲ ಸೌಕರ್ಯಗಳ ಬಗ್ಗೆ ಸಾರ್ವಜನಿಕರು ಮತ್ತು ವಾಹನ ಸವಾರರು ಅನುಭವಿಸುತ್ತಿರುವ
ಸಂಕಷ್ಟಗಳ ಬಗ್ಗೆ ಸಾಮಾಜಿಕ ಕಾರ್ಯಕರ್ತ ಕುಚ್ಚೂರು ಶ್ರೀಕಾಂತ್ ಪೂಜಾರಿ ನೇತ್ರತ್ವದಲ್ಲಿ ಇತ್ತೀಚೆಗೆ ಮನವಿ ಸಲ್ಲಿಸಲಾಯಿತು.
ಮನವಿಗೆ ಸ್ಪಂದಿಸಿದ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಗುರುವಾರ ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ಮಾಡಿ ರಸ್ತೆ ಹಾಗೂ ಸೇತುವೆ ನಿರ್ಮಾಣಗಳನ್ನು ಕಾಮಗಾರಿ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದ್ದಾರೆ.
ಸಾಮಾಜಿಕ ಕಾರ್ಯಕರ್ತ ಶ್ರೀಕಾಂತ್ ಪೂಜಾರಿ ಮತ್ತು ಸ್ಥಳೀಯರು ಹಾಜರಿದ್ದರು.




