ಮುನಿಯಾಲು :ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ಹಿರ್ಗಾನ ಕಾರ್ಕಳದಲ್ಲಿ ನಡೆದ ತಾಲ್ಲೂಕು ಮಟ್ಟದ 14ರ ವಯೋಮಿತಿಯ ಬಾಲಕ ಮತ್ತು ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಮುನಿಯಾಲಿನ ಬಾಲಕ ಮತ್ತು ಬಾಲಕಿಯರ ತಂಡ ಪ್ರಥಮ ಸ್ಥಾನವನ್ನು ಪಡೆದು ಹೊಸಂಗಡಿಯಲ್ಲಿ ನಡೆಯಲಿರುವ ಜಿಲ್ಲಾಮಟ್ಟದ ಪಂದ್ಯಾಟಕ್ಕೆ ಅರ್ಹತೆಯನ್ನು ಪಡೆದಿದೆ.
ದೈಹಿಕ ಶಿಕ್ಷಣ ಶಿಕ್ಷಕ ಪ್ರಶಾಂತ್ ಕುಮಾರ್ ಮತ್ತು ದೈಹಿಕ ಶಿಕ್ಷಣ ಶಿಕ್ಷಕಿ ಭಾರತಿ ತಂಡಗಳಿಗೆ ತರಬೇತಿಯನ್ನು ನೀಡಿದ್ದಾರೆ. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಪ್ರಾಂಶುಪಾಲರು, ಉಪ ಪ್ರಾಂಶುಪಾಲರು, ಮುಖ್ಯಶಿಕ್ಷಕರು ಮತ್ತು ಬೋಧಕ ಬೋಧಕೇತರ ವೃಂದದವರು ವಿಜೇತ ತಂಡವನ್ನು ಅಭಿನಂದಿಸಿದ್ದಾರೆ.




