ಮುನಿಯಾಲು : ಗುರು ಕೃಪಾ ಸ್ಕೂಲ್ ಬಲ್ಯೊಟ್ಟು ಹೊಸ್ಮಾರು ಕಾರ್ಕಳದಲ್ಲಿ ನಡೆದ 17ರ ವಯೋಮಿತಿಯ ಬಾಲಕರ ಕಬ್ಬಡಿ ಪಂದ್ಯಾಟದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಮುನಿಯಾಲಿನ ಪ್ರೌಢಶಾಲಾ ವಿಭಾಗದ ಬಾಲಕರ ತಂಡ ಪ್ರಥಮ ಸ್ಥಾನ ಗಳಿಸಿ ಹೊಸಂಗಡಿಯಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಅರ್ಹತೆಯನ್ನು ಪಡೆದಿದೆ. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಪ್ರಾಂಶುಪಾಲರು, ಉಪ ಪ್ರಾಂಶುಪಾಲರು, ಮುಖ್ಯ ಶಿಕ್ಷಕರು ಮತ್ತು ಬೋಧಕ ಬೋಧಕೇತರ ವೃಂದದವರು ವಿಜೇತ ತಂಡವನ್ನು Professionals.ದೈಹಿಕ ಶಿಕ್ಷಣ ಶಿಕ್ಷಕ ಪ್ರಶಾಂತ್ ಕುಮಾರ್ ಮತ್ತು ದೈಹಿಕ ಶಿಕ್ಷಣ ಶಿಕ್ಷಕಿ ಭಾರತಿ ತಂಡಗಳಿಗೆ ತರಬೇತಿಯನ್ನು ನೀಡಿದ್ದಾರೆ.
ಬಾಲಕರ ಕಬ್ಬಡಿ ಪಂದ್ಯಾಟ: ಕರ್ನಾಟಕ ಪಬ್ಲಿಕ್ ಸ್ಕೂಲ್ ಮುನಿಯಾಲಿನ ಪ್ರೌಢಶಾಲಾ ವಿಭಾಗದ ಬಾಲಕರ ತಂಡ ಪ್ರಥಮ ಸ್ಥಾನ.



