Thursday, September 24, 2026
Homeಹೆಬ್ರಿ ಆಗುಂಬೆ ಘಾಟ್ ರಸ್ತೆ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ರೂ. 18.00 ಕೋಟಿ ಅನುದಾನ ಬಿಡುಗಡೆ.

 ಆಗುಂಬೆ ಘಾಟ್ ರಸ್ತೆ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ರೂ. 18.00 ಕೋಟಿ ಅನುದಾನ ಬಿಡುಗಡೆ.

ಹೆಬ್ರಿ: ಕರಾವಳಿ ಮತ್ತು ಮಲೆನಾಡು ಸೇರಿದಂತೆ ಉತ್ತರ ಕರ್ನಾಟಕದ ಸಂಪರ್ಕ ಸೇತು ಉಡುಪಿ ಹೆಬ್ರಿ ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿಯ ಆಗುಂಬೆ ಘಾಟಿಯ ಆಯ್ದ ಭಾಗಗಳಲ್ಲಿ ಕಾಂಕ್ರೀಟ್ ತಡೆಗೋಡೆ ಸಹಿತ ಆಗುಂಬೆಯಿಂದ ಹೆಬ್ರಿ ಪೇಟೆ ತನಕ ರಸ್ತೆ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ರಾಷ್ಟ್ರೀಯ ಹೆದ್ದಾರಿ ವತಿಯಿಂದ 18 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ.

ಆಗುಂಬೆ ಘಾಟ್ ರಸ್ತೆ ಅಭಿವೃದ್ಧಿ ಸೇರಿದಂತೆ ಕೆಲವೊಂದು ತಿರುವುಗಳಲ್ಲಿ ವಾಹನಗಳ ಸುಗಮ ಸಂಚಾರದ ಹಿತ ದೃಷ್ಟಿಯಿಂದ ಸದರಿ ರಸ್ತೆ ಅಭಿವೃದ್ಧಿಗೆ ಸಂಸದರ ಮುಖಾಂತರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಅದರಂತೆ ಕೇಂದ್ರ ಸರ್ಕಾರವು ರಾಷ್ಟ್ರೀಯ ಹೆದ್ದಾರಿ ವತಿಯಿಂದ ರೂಪಾಯಿ 18 ಕೋಟಿ ಅನುದಾನ ಬಿಡುಗಡೆ ಎಂದು ತಿಳಿದು ಬಂದಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!