ಹೆಬ್ರಿ: ಹೆಬ್ರಿ ಮತ್ತು ಬ್ರಹ್ಮಾವರ ತಾಲ್ಲೂಕುಗಳಲ್ಲಿ ಜಂಟಿಯಾಗಿ ನಡೆಯಲಿರುವ ಗಾಂಧಿ ಜಯಂತಿ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ಶನಿವಾರ ಹೆಬ್ರಿ ಯೋಜನಾ ಕಚೇರಿಯಲ್ಲಿ ನಡೆಸಲಾಯಿತು ಸಭೆಯನ್ನು ಉದ್ಯಮಿ ಧಾರ್ಮಿಕ ಮುಂದಾಳು ಹೆಬ್ರಿ ಭಾಸ್ಕರ ಜೋಯಿಸ್ ಉದ್ಘಾಟಿಸಿದರು.
ಸಭೆಯಲ್ಲಿ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ವಾದಿರಾಜ ಶೆಟ್ಟಿ, ಬ್ರಹ್ಮಾವರ ತಾಲೂಕಿನ ಜನಜಾಗೃತಿ ವೇದಿಕೆಯ ಅಧ್ಯಕ್ಷ ಪ್ರಸಾದ್ ಹೆಗ್ಡೆ, ಹೆಬ್ರಿ ವಲಯದ ಜನಜಾಗೃತಿ ವೇದಿಕೆಯ ಅಧ್ಯಕ್ಷ ವಿಠ್ಠಲ ಶೆಟ್ಟಿ, ತಾಲೂಕಿನ ಜನಜಾಗೃತಿ ವೇದಿಕೆಯ ಸದಸ್ಯರು, ವಲಯದ ಅಧ್ಯಕ್ಷರು, ಶೌರ್ಯ ವಿಪತ್ತು ನಿರ್ವಹಣಾ ಘಟಕದ ಕ್ಯಾಪ್ಟನ್ ಹಾಗೂ ಸದಸ್ಯರು, ಬ್ರಹ್ಮಾವರ ಮತ್ತು ಹೆಬ್ರಿ ತಾಲೂಕಿನ ಯೋಜನಾಧಿಕಾರಿಗಳು ಹಾಗೂ ಮೇಲ್ವಿಚಾರಕರು ಉಪಸ್ಥಿತರಿದ್ದರು.
ಅಕ್ಟೋಬರ್ 04, ಭಾನುವಾರ ಬೆಳಿಗ್ಗೆ 9:00 ಗಂಟೆಗೆ ಅರ್ಧನಾರೀಶ್ವರ ದೇವಸ್ಥಾನದಿಂದ ಜಾಥಾ ಮೂಲಕ ಕಾರ್ಯಕ್ರಮವನ್ನು ಪ್ರಾರಂಭಿಸುವ ಬಗ್ಗೆ ಸಭೆಯಲ್ಲಿ ತಿಳಿಸಲಾಯಿತು.
ನಂತರ ಕಾರ್ಯಕ್ರಮವನ್ನು ಅನಂತಪದ್ಮನಾಭ ಸನ್ನಿಧಿ ಸಭಾಂಗಣ, ಹೆಬ್ರಿಯಲ್ಲಿ ನಡೆಸುವಂತೆ ತೀರ್ಮಾನಿಸಲಾಯಿತು.




