ಹೆಬ್ರಿ : ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ , ಹೆಬ್ರಿ ಶಾಖೆಯ ವತಿಯಿಂದ ಆಯೋಜಿಸಲಾಗಿದ್ದ ಶಿಕ್ಷಕರ ದಿನಾಚರಣೆಯ ಅಂಗವಾಗಿ 10ನೇ ತರಗತಿಯ ವಿದ್ಯಾರ್ಥಿಗಳಿಗೆ ನಡೆದ ಶಾಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳಾದ ಆತ್ರೇಯ ನಾಯಕ್ ಪ್ರಥಮಸ್ಥಾನ, ಪಲ್ಲವಿ ದ್ವಿತೀಯ ಸ್ಥಾನ, ಸೃಷ್ಟಿ ತೃತೀಯ ಸ್ಥಾನವನ್ನು ಪಡೆದಿದ್ದಾರೆ. ವಿದ್ಯಾರ್ಥಿಗಳನ್ನು ಸಂಸ್ಥೆಯ ಮುಖ್ಯಸ್ಥೆ ಅಪರ್ಣಾ ಆಚಾರ್ ಅಭಿನಂದಿಸಿದ್ದಾರೆ.



