Wednesday, September 23, 2026
Homeಮುದ್ರಾಡಿ ಗ್ರಾಮ ಪಂಚಾಯತ್‌ಮುದ್ರಾಡಿಯಲ್ಲಿ ಶಿಕ್ಷಕರ ದಿನಾಚರಣೆ.

ಮುದ್ರಾಡಿಯಲ್ಲಿ ಶಿಕ್ಷಕರ ದಿನಾಚರಣೆ.

ಮುದ್ರಾಡಿ : ಮುದ್ರಾಡಿ ಎಂಎನ್ ಡಿ ಎಸ್ಎಂ ಅನುದಾನಿತ ಪ್ರೌಢಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ರೂಪಿಸುವಲ್ಲಿ ಕಾರಣೀಕರ್ತರಾದ ಶಿಕ್ಷಕರನ್ನು ಗೌರವಿಸಿ, ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನವನ್ನು ವಿತರಿಸಿ ಸಂಭ್ರಮಿಸಿದರು.

ಶಾಲೆಯ ಮುಖ್ಯ ಶಿಕ್ಷಕರಾದ ಬಲ್ಲಾಡಿ ಚಂದ್ರಶೇಖರ ಭಟ್ ದೀಪ ಬೆಳಗಿಸಿ ಚಾಲನೆ ನೀಡಿದರು. ವಿದ್ಯಾರ್ಥಿಗಳಾದ ಶ್ರೀಯಾ, ಸುಮಂತ್, ಸಹನಾ ಎಚ್. ಹಾಗೂ ಚಿರಾಯ್ ಶಿಕ್ಷಕರ ದಿನಾಚರಣೆಯ ಮಹತ್ವದ ಬಗ್ಗೆ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.

ವಿದ್ಯಾರ್ಥಿನಿ ತನಿಯಾ ಸ್ವಾಗತಿಸಿದರು.ವಿದ್ಯಾರ್ಥಿನಿ ಅಂಜಲಿ ಕಾರ್ಯಕ್ರಮ ನಿರೂಪಿಸಿ, ಸಿಂಚನಾ ವಂದಿಸಿದರು.ಶಾಲಾ ವಿದ್ಯಾರ್ಥಿ ನಾಯಕ ಪ್ರತೀಕ್ ಹೆಬ್ಬಾರ್, ಶೋಭಿತ್,ಪ್ರಥ್ವಿನ್, ಆಯುಷ್ಯಾ, ರೇಷ್ಮಾ ಮತ್ತು ತಂಡದವರು ವಿವಿಧ ಸ್ಪರ್ಧೆಗಳನ್ನು ನಡೆಸಿಕೊಟ್ಟರು.ಶಿಕ್ಷಕರಾದ ಮಹೇಶ್ ನಾಯ್ಕ್, ಪಿ. ವಿ. ಆನಂದ, ಶ್ಯಾಮಲಾ, ರಘುಪತಿ ಹೆಬ್ಬಾರ್, ಅನುಷಾ, ಶಿಕ್ಷಕೇತರ ಸಿಬ್ಬಂದಿ ಮಹೇಶ್ ಪಾಲ್ಗೊಂಡಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!