Thursday, September 24, 2026
Homeಹೆಬ್ರಿಹೆಬ್ರಿಗೆ ಮುಖ್ಯಮಂತ್ರಿ ಭೇಟಿ: ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಭೇಟಿ; ಸಿದ್ಧತೆ ಪರಿಶೀಲನೆ.

ಹೆಬ್ರಿಗೆ ಮುಖ್ಯಮಂತ್ರಿ ಭೇಟಿ: ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಭೇಟಿ; ಸಿದ್ಧತೆ ಪರಿಶೀಲನೆ.

ಹೆಬ್ರಿ : ಹೆಬ್ರಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿರುವ ಕಸ್ತೂರಿ ರಂಗನ್ ವರದಿಯ ವ್ಯಾಪ್ತಿಯಲ್ಲಿ ಬರುವ ಜನ ಸಾಮಾನ್ಯರ ಸಮಸ್ಯೆಗಳ ಬಗ್ಗೆ ಅರಿಯಲು ನಡೆಯಲಿರುವ ಮುಖ್ಯಮಂತ್ರಿಗಳ
ಸಭೆಯನ್ನು ಅಚ್ಚುಕಟ್ಟಾಗಿ ನೆರೆವೇರಿಸಬೇಕು ಎಂದು ಅಧಿಕಾರಿಗಳಿಗೆ ರಾಜ್ಯದ ಆಹಾರ, ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ರಿಜ್ವಾನ್ ಅರ್ಷದ್ ಸೂಚನೆ ನೀಡಿದರು.

ಅವರು ಗುರುವಾರ ಹೆಬ್ರಿ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷ ತೆ ವಹಿಸಿ ಮಾತನಾಡಿದರು.

ಹೆಲಿಪ್ಯಾಡ್, ಸಭೆ ನಡೆಯುವ ಕಾಲೇಜು ಮೈದಾನದಲ್ಲಿ ಹಾಕಿರುವ ಪೆಂಡಾಲ್ ಮತ್ತು ಊಟ ಕುಡಿಯುವ ನೀರಿನ ವ್ಯವಸ್ಥೆಯನ್ನು ವೀಕ್ಷಿಸಿ ಹಲವು ಸೂಚನೆಗಳನ್ನು ಸಚಿವರು ನೀಡಿದರು.
ಕಾರ್ಯಕ್ರಮವನ್ನು ಸರ್ಕಾರದ ಶಿಷ್ಟಚಾರದಂತೆ ಆಯೋಜಿಸಬೇಕು. ಸಭೆಗೆ ಹೆಚ್ಚು ಜನಸಾಮಾನ್ಯರು ಆಗಮಿಸಿವುದರಿಂದ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಹಾಗೂ ಹೆಲಿಪ್ಯಾಡ್ ನಲ್ಲಿ ಸ್ಥಳದಲ್ಲಿ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಲು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ ಸಚಿವರು
ಸಭೆಗೆ ಆಗಮಿಸುವ ಜನ ಸಾಮಾನ್ಯರ ಅರೋಗ್ಯದಲ್ಲಿ ಸಮಸ್ಯೆ ಉಂಟಾದರೆ ತಕ್ಷಣದಲ್ಲಿ ಚಿಕಿತ್ಸೆ ನೀಡಲು ಅನುಕೂಲವಾಗುವಂತೆ ತುರ್ತು ಆರೋಗ್ಯ ಚಿಕಿತ್ಸಾ ಕೇಂದ್ರವನ್ನು ತೆರೆದು, ಕೇಂದ್ರದಲ್ಲಿ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗಳನ್ನು ನಿಯೋಜಿಸಲು ಸೂಚಿಸಿ, ಆಂಬುಲೆನ್ಸ್ ವ್ಯವಸ್ಥೆಯನ್ನು ಸನ್ನದ್ಧ ಸ್ಥಿತಿಯಲ್ಲಿ ಇಡಲು ಸೂಚನೆ ನೀಡಿದರು.

ಸಭೆಗೆ ಆಗಮಿಸುವವರಿಗೆ ಆಸನ, ಕುಡಿಯುವ ನೀರು ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯ, ವಾಹನ ನಿಲುಗಡೆಗೆ ಪ್ರತ್ಯೇಕ ವ್ಯವಸ್ಥೆ ಮಾಡಬೇಕು ಹಾಗೂ ವಿದ್ಯುತ್ ಶಕ್ತಿ ಅಡಚಣೆ ಉಂಟಾಗದಂತೆ ನಿರಂತರ ವಿದ್ಯುತ್ ವ್ಯವಸ್ಥೆ ಕಲ್ಪಿಸಬೇಕು. ಧ್ವನಿವರ್ಧಕ ಉತ್ತಮ ಹಾಗೂ ಸಮರ್ಪಕವಾಗಿ ಇರಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.

ಪಶ್ಚಿಮ ಘಟ್ಟದ ಕಾಡಂಚಿನ ಗ್ರಾಮಗಳ ಜನರು ಸಭೆಗೆ ಭಾಗವಹಿಸಲು ಅನುಕೂಲವಾಗುವಂತೆ ಅಗತ್ಯಕ್ಕೆ ತಕ್ಕಂತೆ ಸೂಕ್ತ ಬಸ್ ವ್ಯವಸ್ಥೆ ಮಾಡಲು ತಿಳಿಸಿದರು.

ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಮಾತನಾಡಿ, ಕಾರ್ಯಕ್ರಮ ನಡೆಯಲು ಕೈಗೊಂಡಿರುವ ಪೂರ್ವ ಸಿದ್ಧತೆಗಳನ್ನು ಸಭೆಯಲ್ಲಿ ವಿವರವಾಗಿ ತಿಳಿಸಿದರು.

ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ. ಎ ಗಫೂರ್, ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮುದ್ರಾಡಿ ಮಂಜನಾಥ ಪೂಜಾರಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಕಾರ್ಕಳದ ಮುಖಂಡರಾದ ಉದಯ್ ಕುಮಾರ್ ಶೆಟ್ಟಿ ಮುನಿಯಾಲು,ಜಿಲ್ಲಾ ಕಾಂಗ್ರೆಸ್ ಕಿಶನ್ ಹೆಗ್ಡೆ ಕೊಳ್ಕೆಬೈಲು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಡಿ.ಎಫ್.ಓ ರುಥ್ರೇನ್ ಪಿ, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಹೆಬ್ರಿ ತಹಶೀಲ್ಧಾರ್ ರಾಕೇಶ್ ಫ್ರಾನ್ಸಿಸ್ ಬ್ರೀಟ್ಟೋ, ಸಹಾಯಕ ಕಮೀಷನರ್ ಎಸ್.ಆರ್. ರಶ್ಮಿ, ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುನಿಯಾಲು ಗೋಪಿನಾಥ್ ಭಟ್, ಪ್ರಚಾರ ಸಮಿತಿಯ ಅಧ್ಯಕ್ಷ ನವೀನ್ ಕೆ ಅಡ್ಯಂತಾಯ, ಮುಖಂಡ ಪ್ರವೀಣ ಬಲ್ಲಾಳ್, ಉದ್ಯಮಿ ಹೆಬ್ರಿ ಸತೀಶ್ ಪೈ ಸೇರಿದಂತೆ ಜನಪ್ರತಿನಿಧಿಗಳು, ವಿವಿಧ ಇಲಾಖೆಯ ಅಧಿಕಾರಿಗಳು, ಗಣ್ಯರು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!