ಹೆಚ್ಚುವರಿ ಜಮೀನು ಸ್ವಾಧೀನ ಪ್ರಕ್ರಿಯೆ ಪ್ರಗತಿಯಲ್ಲಿದೆ.
ಕೈಗಾರಿಕೋದ್ಯಮಿಗಳ ಬೇಡಿಕೆಗೆ ಅನುಗುಣವಾಗಿ ಅಭಿವೃದ್ಧಿ ಪಡಿಸಲು ಕ್ರಮ.
ಮಂಗಳೂರು : ಉಡುಪಿ ಜಿಲ್ಲೆ, ಹೆಬ್ರಿ ತಾಲ್ಲುಕು, ಕೆರೆಬೆಟ್ಟು ಮತ್ತು ಶಿವಪುರ ಗ್ರಾಮಗಳಲ್ಲಿ ಮಂಡಳಿಯು ಕೈಗಾರಿಕಾ ಪ್ರದೇಶವನ್ನು ಅಭಿವೃದ್ಧಿಪಡಿಸುವ ಬಗ್ಗೆ ಒಟ್ಟು 113-89 ಎಕರೆ ಜಮೀನನ್ನು ಸ್ವಾಧೀನಪಡಿಸಲು ಅಂತಿಮ ಅಧಿಸೂಚನೆಯನ್ನು ದಿನಾಂಕ 31.01.2023 ರಂದು ಹೊರಡಿಸಲಾಗಿರುತ್ತದೆ. ಪ್ರಸ್ತಾವಿತ ಸ್ವಾಧೀನ ಪ್ರದೇಶದ ಹೆಚ್ಚಿನ ಜಮೀನುಗಳಿಗೆ ಈಗಾಗಲೇ ಪರಿಹಾರ ಪಾವತಿಸಲಾಗಿದ್ದು, ಮರ / ಮಾಲ್ಕಿ ಹಾಗೂ ಕಟ್ಟಡ ವಿನ್ಯಾಸಗಳಿಗೆ ಸಂಬಂಧಪಟ್ಟಂತೆ ಪರಿಹಾರ ವಿತರಣೆಯು ಪ್ರಗತಿಯಲ್ಲಿರುತ್ತದೆ. ಮುಂದುವರೆದು, ಸದರಿ ಸ್ವಾಧೀನ ಪ್ರದೇಶದ ಆಯಕಟ್ಟಿಗೆ ಹೊಂದಿಕೊಂಡಂತೆ ಹೆಚ್ಚುವರಿ ಜಮೀನನ್ನು ಸ್ವಾಧೀನಪಡಿಸುವ ಪ್ರಕ್ರಿಯೆಯು ಪ್ರಗತಿಯಲ್ಲಿದ್ದು, ಕೈಗಾರಿಕೋದ್ಯಮಿಗಳ ಬೇಡಿಕೆಗೆ ಅನುಗುಣವಾಗಿ ಅಭಿವೃದ್ಧಿಪಡಿಸಿ ಡೇಟಾ ಸೆಂಟರ್, ಕಾರ್ಖಾನೆ, ಉತ್ಪಾದನೆ ಮತ್ತು ಇತ್ಯಾದಿ ಕಾರ್ಯಚಟುವಟಿಕೆಗೆ ಹಂಚಿಕೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.



