ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ ಕೇಮಾರುಶ್ರೀ.
ಮೂಡುಬಿದಿರೆ ಸಮೀಪದ ಕೇಮಾರುವಿನಲ್ಲಿರುವ ಶ್ರೀ ಕ್ಷೇತ್ರ ಸಾಂದೀಪನಿ ಸದಾಶ್ರಮಕ್ಕೆ ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ರೂ.1 ಕೋಟಿ ಅನುದಾನ ಘೋಷಣೆ
ಮಾಡಿದ್ದಾರೆ.
ಈ ಕುರಿತು ಹೆಬ್ರಿ ನ್ಯೂಸ್ ಗೆ ಪ್ರತಿಕ್ರಿಯಿಸಿರುವ ಮಠದ ಶ್ರೀ ಈಶ ವಿಠ್ಠಲದಾಸ ಸ್ವಾಮೀಜಿಯವರು ತುಳುವಿಗೆ ಪ್ರಾಶಸ್ತ್ಯ ನೀಡಿರುವುದಕ್ಕೆ ಹಾಗೂ ಗ್ರಾಮೀಣ ಪ್ರದೇಶದಲ್ಲಿರುವ ಬಡ ಮಠಗಳನ್ನು ಗುರುತಿಸಿ ಆಯ್ಕೆ ಮಾಡಿರುವುದಕ್ಕೆ ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.
ವಾಸ್ತವವಾಗಿ ನಮ್ಮ ಮಠಗಳೆಲ್ಲ ಗ್ರಾಮೀಣ ಪ್ರದೇಶದಲ್ಲಿರುವ ಬಡ ಮಠಗಳಾಗಿವೆ. ಇಂತಹ ಗ್ರಾಮೀಣ ಪ್ರದೇಶದ ಬಡ ಮಠಗಳನ್ನು ಗುರುತಿಸಿ ಆಯ್ಕೆ ಮಾಡಿರುವುದಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಈಶ ವಿಠ್ಠಲದಾಸ ಸ್ವಾಮೀಜಿ ಹೇಳಿದ್ದಾರೆ.
ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಮತ್ತು ನಾಯಕರಿಗೆ, ಜನಪ್ರತಿನಿಧಿಗಳಿಗೆ ವಿಶೇಷ ಕೃತಜ್ಞತೆಯನ್ನು ಸ್ವಾಮೀಜಿ ಸಲ್ಲಿಸಿದ್ದಾರೆ.



