ಕುಚ್ಚೂರು : ಹೆಬ್ರಿ ತಾಲ್ಲೂಕಿನ ಕುಚ್ಚೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಬೇಳಂಜೆ ದೊಡ್ಡಮನೆ ಗಣೇಶ್ ಶೆಟ್ಟಿ ಅವರ ಮನೆಯ ಹಟ್ಟಿಯ ಹಿಂಭಾಗದಲ್ಲಿ ಭಾನುವಾರ ಮುಂಜಾನೆ ಕಪ್ಪು ಚಿರತೆಯೊಂದು ಕಾಣಿಸಿಕೊಂಡಿದೆ. ಬೇಳಂಜೆ ಪರಿಸರದಲ್ಲಿ ಭಯದ ಸ್ಥಿತಿ ನಿರ್ಮಾಣವಾಗಿದೆ.
ಅರಣ್ಯ ಇಲಾಖೆಯವರು ಕೂಡಲೇ ಸ್ಪಂದಿಸಿ ಚಿರತೆಯನ್ನು ಸೆರೆ ಹಿಡಿಯುವಂತೆ ಸ್ಥಳೀಯ ಮುಖಂಡರಾದ ಅಮೃತ್ ಕುಮಾರ್ ಶೆಟ್ಟಿ ಅರಣ್ಯ ಇಲಾಖೆಯ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.



