ಉಡುಪಿ ಜಿಲ್ಲಾ ಪಂಚಾಯತ್ ಉಪನಿರ್ದೇಶಕರ ಕಚೇರಿ ಶಾಲಾ ಶಿಕ್ಷಣ ಇಲಾಖೆ ಮಣಿಪಾಲ ಉಡುಪಿ ಜಿಲ್ಲೆ, ಇದರ ವತಿಯಿಂದ ಏರ್ಪಡಿಸಿದ 2026-27ನೇ ಸಾಲಿನ ಪ್ರಾಚ್ಯಪ್ರಜ್ಞೆ ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ ಚಿತ್ರಕಲಾ ಸ್ಪರ್ಧೆಯಲ್ಲಿ ಹೆಬ್ರಿ ಎಸ್.ಆರ್.ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಸಾನಿಧ್ಯ ಆಚಾರ್ಯ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿನಿಯನ್ನು ಎಸ್ ಆರ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಎಚ್ ನಾಗರಾಜ ಶೆಟ್ಟಿ ಹಾಗೂ ಕಾರ್ಯದರ್ಶಿ ಸಪ್ನಾ ಎನ್ ಶೆಟ್ಟಿ ಅವರು ಅಭಿನಂದಿಸಿದ್ದಾರೆ.



