ಹೆಬ್ರಿ : ಸಹಕಾರಿ ಸಪ್ತಾಹವನ್ನು 2025-26ನೇ ಸಾಲಿನಲ್ಲಿ ಯಶಸ್ವಿಯಾಗಿ ನಡೆಸಿಕೊಟ್ಟ ಹೆಬ್ರಿ ವ್ಯವಸಾಯ ಸೇವಾ ಸಹಕಾರಿ ಸಂಘವನ್ನು ಅಭಿನಂದಿಸಲಾಯಿತು. ಹೆಬ್ರಿ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ನವೀನ್ ಕೆ ಅಡ್ಯಂತಾಯ ಮತ್ತು ಸಿಇಒ ಶೀನ ನಾಯ್ಕ್ ಅವರು ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನೀಡಿದ ಸನ್ಮಾನ ಸ್ವೀಕರಿಸಿದರು. ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ ಹಾಗೂ ನಿರ್ದೇಶಕರು ಉಪಸ್ಥಿತರಿದ್ದರು.



