ಹೆಬ್ರಿ : ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಉಡುಪಿ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಕಾರ್ಕಳ , ಹೆಬ್ರಿ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಇದರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ 17ರ ವಯೋಮಿತಿಯ ಬಾಲಕರ ವಾಲಿಬಾಲ್ ಪಂದ್ಯಾವಳಿಯಲ್ಲಿ ಕಾರ್ಕಳ ತಾಲೂಕನ್ನು ಪ್ರತಿನಿಧಿಸಿದ ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಚಾಂಪಿಯನ್ ಶಿಪ್ ಪ್ರಶಸ್ತಿಯನ್ನು ಪಡೆದು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
10ನೇ ತರಗತಿಯ ನಿತೀಶ್ ಬೆಸ್ಟ್ ಅಟ್ಯಾಕರ್ ಮತ್ತು 10ನೇ ತರಗತಿಯ ಪ್ರಥಮ್ ಬೆಸ್ಟ್ ಸೆಟ್ಟರ್ ಪ್ರಶಸ್ತಿಯನ್ನು ವೈಯಕ್ತಿಕವಾಗಿ ಪಡೆದಿದ್ದಾರೆ.
ವಿದ್ಯಾರ್ಥಿಗಳನ್ನು ಮತ್ತು ತರಬೇತಿ ನೀಡಿದ ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ನಿಶಾನ್ ಶೆಟ್ಟಿ ಇವರನ್ನು ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ಶೈಲೇಶ್ ಕಿಣಿ, ಮುಖ್ಯ ಶಿಕ್ಷಕಿ ಅಪರ್ಣಾ ಆಚಾರ್ ಅಭಿನಂದಿಸಿದ್ದಾರೆ.



